ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ಆವರಣದ ವಿಶ್ರಾಂತಿ ಕೊಠಡಿಯಲ್ಲಿ ಜೂಜಾಟವಾಡುತ್ತಿದ್ದ 5 ಕಾನ್ ಸ್ಟೆಬಲ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಸೋಮವಾರ ರಾತ್ರಿ ಜೂಜಾಟವಾಡುತ್ತಿದ್ದವರು ಐಜಿ ಸ್ಕ್ವಾಡ್ ನ ತಂಡಕ್ಕೆ ಸಿಕ್ಕಿ ಬಿದ್ದಿದ್ದಾರೆ. ಬಂಧಿತರಿಂದ 29 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ.
ಕಾನ್ ಸ್ಟೆಬಲ್ ಗಳಾದ ಲೋಹಿತ್ , ನಾಗರಾಜ್, ಮಂಜಪ್ಪ, ಮಹೇಶ್ , ಬಾಲರಾಜ್ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



