ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯಸಭೆ ಚುನಾವಣೆ ಅಭ್ಯರ್ಥಿಯಾಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವಬೆದರಿಕೆ ಕರೆ ಬಂದಿದೆ. ಈ ಕುರಿತು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಗೆ ಪ್ರಿಯಾಂಕ್ ಖರ್ಗೆ ದೂರು ನೀಡಿದ್ದಾರೆ.
ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮನೆಯ ದೂರವಾಣಿಗೆ ಜೂನ್ 7ರ ಮಧ್ಯರಾತ್ರಿ 1.30ಕ್ಕೆ ಕರೆ ಮಾಡಿದ್ದಾನೆ. ಕರೆ ಸ್ವೀಕರಿಸಿದ ನಂತರ ಖರ್ಗೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅದೇ ದಿನ ರಾತ್ರಿ 12.36ರಿಂದ 12.53ರ ಮಧ್ಯೆ ನನಗೂ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದ್ದು, ಕರೆ ಸ್ವೀಕರಿಸಲಿಲ್ಲ. ರಾತ್ರಿ 1 ಗಂಟೆಗೆ ಮತ್ತೆ ಕರೆ ಮಾಡಿದ್ದ ವ್ಯಕ್ತಿ ಕಟ್ಟ ಪದಗಳಿಂದ ನಿಂದಿಸಿ ಜೀವಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಬಗ್ಗೆ ಕರೆ ಸಬಂಧಿಸಿದ ಎಲ್ಲಾ ದಾಖಲಾತಿ ನೀಡಿರುವ ಖರ್ಗೆ, ಕರೆ ಮಾಡಿರುವ ವ್ಯಕ್ತಿಯನ್ನು ಕೂಡಲೇ ಪತ್ತೆ ಹಚ್ಚಿ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.



