ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡ್ಮೂರು ತಿಂಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿತ್ತು. ಆದರೆ, ಕಳೆದ ಎರಡು ದಿನಗಳಿಂದ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಇಂದು 120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಒಂದೇ ದಿನ ರಾಜ್ಯದಲ್ಲಿ 257 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,041ಕ್ಕೆ ಏರಿಕೆಯಾಗಿದೆ. ಇನ್ನು ಇಂದು ರಾಜ್ಯದ ವಿವಿಧ ಭಾಗದಲ್ಲಿ ಮೂವರು ಮಂದಿ ಮೃತಪಟ್ಟಿದ್ದಾರೆ. ಸೋಂಕಿನಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರ 42, ಯಾದಗಿರಿ 27, ವಿಜಯಪುರ 13, ಕಲಬುರ್ಗಿ 11, ಬೀದರ್ 5, ದಕ್ಷಿಣ ಕನ್ನಡ ಮತ್ತು ಧಾರವಾಡ ತಲಾ 4, ದಾವಣಗೆರೆ, ಹುಬ್ಬಳ್ಳಿ ಮತ್ತು ಬಳ್ಳಾರಿ ತಲಾ 3, ಬಾಗಲಕೋಟೆ ಮತ್ತು ರಾಮನಗರ ತಲಾ 2, ಬೆಳಗಾವಿ 1 ಪಾಸಿಟಿವ್ ಪತ್ತೆಯಾಗಿವೆ.



