ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 10,956 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಂದೇ ದಿನದಲ್ಲಿ 396 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 2,97,535 ತಲುಪಿದೆ.
ಇದುವರೆಗೆ ದೇಶದಲ್ಲಿ ಕೊರೊನಾ ಸೋಂಕಿನಿಂದಾಗಿ 8,498 ಜನ ಮೃತಪಟ್ಟಿದ್ದಾರೆ. 1,47,195 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1,41,842 ಸಕ್ರಿಯ ಪ್ರಕರಣಗಳಿವೆ.
ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಕೊರೊನಾ ಪಿಡುಗು ಏರಿಕೆ ಮುಂದುವರಿದಿದೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 97,648ಕ್ಕೆ ಏರಿಕೆಯಾಗಿದೆ. ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 38,716 ತಲುಪಿದ್ದರೆ ದೆಹಲಿಯಲ್ಲಿ 34,687ಕ್ಕೆ ಏರಿಕೆಯಾಗಿದೆ.