ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಏಳು ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಈ ಮೂಲಕ ರಾಜ್ಯದಲ್ಲಿ 6,516 ಮಂದಿಗೆ ಸೋಂಕು ತಗುಲಿದ್ದು, ಈವರೆಗೆ 79 ಮಂದಿ ಮೃತಪಟ್ಟಿದ್ದಾರೆ. ಒಟ್ಟು 3,440 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2,995 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. 19 ಜನರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಬಳ್ಳಾರಿಯಲ್ಲಿ 97, ಬೆಂಗಳೂರು ನಗರದಲ್ಲಿ 36, ಉಡುಪಿಯಲ್ಲಿ 22, ಧಾರವಾಡ 19, ದಕ್ಷಿಣ ಕನ್ನಡ 17, ಬೀದರ್ 10, ಹಾಸನ 09, ಮೈಸೂರು 09, ತುಮಕೂರು 07, ಶಿವಮೊಗ್ಗ 06, ರಾಯಚೂರು 04, ಉತ್ತರ ಕನ್ನಡ 04, ಚಿತ್ರದುರ್ಗ 03, ರಾಮನಗರ 03, ಮಂಡ್ಯ 02, ಬೆಳಗಾವಿ 01 ಮತ್ತು ವಿಜಯಪುರ ಮತ್ತು ಕೋಲಾರದಲ್ಲಿ ತಲಾ ಒಂದೊಂದು ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಸಂಜೆಯ ಪತ್ರಿಕಾ ಪ್ರಕಟಣೆ 12/06/2020.
ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಕೆಳಗೆ ಈ ಲಿಂಕನ್ನು ಕ್ಲಿಕ್ ಮಾಡಿ.https://t.co/6uV4FL8NcT@BMTC_BENGALURU @NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/CAWFo9B6TD— Karnataka Health Department (@DHFWKA) June 12, 2020



