ನವದೆಹಲಿ: ಕೊರೊನಾ ಸೋಂಕು ತಡೆ ಹಾಗೂ ಲಾಕ್‌ಡೌನ್ ಸಡಿಲಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 16 ಮತ್ತು 17ರಂದು ವಿವಿಧ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
16ರಂದು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಹಾಗೂ 17ರಂದು ಉಳಿದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಪ್ರಧಾನಿ ಕಚೇರಿಯ ಮೂಲಗಳು ತಿಳಿಸಿವೆ.
ಮೋದಿ ಅವರು ಮುಖ್ಯಮಂತ್ರಿಗಳೊಂದಿಗೆ ನಡೆಸಲಿರುವ 6ನೇ ಸಭೆ ಇದಾಗಿದೆ. ಈಗಾಗಲೇ ಅನ್‌ಲಾಕ್ ಶುರುವಾಗಿದ್ದು, ಆರ್ಥಿಕ ಹಾಗೂ ವಾಣಿಜ್ಯ ಚಟುವಟಿಕೆಗಳು ಶುರುವಾಗಿವೆ. ಆದರೆ, ಮೆಟ್ರೋ ವಿಮಾನಯಾನ ಸೇವೆ, ಪೂರ್ಣ ಪ್ರಮಾಣದಲ್ಲಿ ರೈಲು ಸಂಚಾರ ಆರಂಭವಾಗಬೇಕಿದೆ.



