ಡಿವಿಜಿಸುದ್ದಿ.ಕಾಂ, ದಾವಣಗೆರೆ: ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು, ಶೋಭಾಯಾತ್ರೆಯ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಲಿದೆ. ಎವಿಕೆ ರಸ್ತೆ, ಅಂಬೇಡ್ಕರ್ ವತ್ತ, ಜಯದೇವ ವೃತ, ಲಾಯರ್ ರಸ್ತೆ ಮೂಲಕ ಪಿಬಿ ರಸ್ತೆಯ ಮೂಲಕ ಸಾಗಲಿದೆ ಗಣಪತಿ ಶೋಭಾ ಯಾತ್ರೆಯಲ್ಲಿ ನಾಲ್ಕು ಡಿಜೆ, ನಾಸಿಕ್ ಡೋಲ್, ಚಂಡೆ, ಮದ್ದಾಳೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗಿಯಾಗಿವೆ. ರಾತ್ರಿ ೮ ಘಂಟೆಗೆ ಬಾತಿಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ನಡೆಯಲಿದೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಿದ್ದು, ನಗರಾದಾದ್ಯಂತ ಮದ್ಯ ಮಾರಾಟ ನಿಷೇಧಿಸಿದೆ.




