ಡಿವಿಜಿ ಸುದ್ದಿ, ದಾವಣಗೆರೆ: ಉಚ್ಚoಗಿದುರ್ಗ ಸಮೀಪದ ಪುಣಭಗಟ್ಟ ಗ್ರಾಮದಲ್ಲಿ ಶನಿವಾರ ನೂತನ ಗ್ರಾಮ ಪಂಚಾಯಿತಿ ಕಟ್ಟಡವನ್ನು ಸಂಸದ ಜಿ.ಎಂ. ಸಿದ್ದೇಶ್ವರ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ದೇಶದ ಆರ್ಥಿಕತೆ ಕುಸಿತ ಕಂಡಿದೆ. ಇದು ಅಭಿವೃದ್ಧಿ ದೃಷ್ಟಿಯಿಂದ ತುಂಬಾ ಹಿನ್ನೆಡೆಯಾಗಿದೆ. ವಿಶ್ವಾದ್ಯಂತ ಸೋಂಕಿಗೆ ಲಕ್ಷಾಂತರ ಮಂದಿ ಮೃತಪಟ್ಟಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ಷಮತೆಯಿಂದ ದೇಶದಲ್ಲಿ ಸೋಂಕು ಹತೋಟಿಯಲ್ಲಿದೆ ಕರೊನಾ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ವಾರಿಯರ್ಸ್ ಗೆ ಅಭಿನಂದನೆಗಳು ಎಂದು ತಿಳಿಸಿದರು.



