ಜೈಪುರ: ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಬೇಕೆಂದು ರಾಜಸ್ಥಾನ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಆಗ್ರಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ಭಾರತ–ಚೀನಾ ಗಡಿ ಭಾಗದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಪೆಟ್ರೋಲ್, ಡಿಸೇಲ್ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಆದಷ್ಟು ಬೇಗ ಕೇಂದ್ರ ಸರ್ಕಾರ ಪೆಟ್ರೋಲ್,ಡಿಸೇಲ್ ಬೆಲೆಗಳನ್ನು ಇಳಿಸಬೇಕು ಒತ್ತಾಯಿಸಿದರು.
ಬೆಲೆ ಏರಿಕೆಯನ್ನು ಖಂಡಿಸಿ ಇದೇ ತಿಂಗಳ 29ರಂದು ಕಾಂಗ್ರೆಸ್ ಪಕ್ಷವು ಎಲ್ಲ ಜಿಲ್ಲಾ ಕಚೇರಿಗಳಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಸಚಿನ್ ಪೈಲಟ್ ಹೇಳಿದರು.



