ನವದೆಹಲಿ: ದೇಶದಾದ್ಯಂತ ಒಂದೇ ದಿನ ಬರೋಬ್ಬರಿ 17,296 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಸಂಖ್ಯೆ ಈವರೆಗೆ ದಾಖಲಾದ ಒಂದೇ ದಿನದಲ್ಲಿ ಅತಿಹೆಚ್ಚಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಒಂದೇ ದಿನ 407 ಜನರು ಮೃತಪಟ್ಟಿದ್ದಾರೆ. ಒಟ್ಟು 4,90,401 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 2,83,637 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ 15,301 ಮಂದಿ ಮೃತಪಟ್ಟಿದ್ದು, 1,89,463 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, 1,47,741 ಪ್ರಕರಣಗಳು ಪತ್ತೆಯಾಗಿವೆ. ದೆಯಲಿಯಲ್ಲಿ 73,780 ಮಂದಿಗೆ ಸೋಂಕು ಪತ್ತೆಯಾಗಿದೆ.



