ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನು ಐದು ದಿನಗಳವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇದೇ 27ರಿಂದ 29ರವರೆಗೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಈ ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರಿಗೆ ಎಚ್ಚರಿಕೆ ನೀಡಲಾಗಿದೆ.
ಇನ್ನು ಬೀದರ್, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಭಾರಿ ಮಳೆ ಬೀಳುವ ಸಾಧ್ಯತೆ ಇದೆ.



