ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯದ (ಇ.ಡಿ) ತಂಡ ಇಂದು ಬೆಳಿಗ್ಗೆ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರ ನಿವಾಸಕ್ಕೆ ಭೇಟಿ ನೀಡಿದೆ ಪರಿಶೀಲನೆ ನಡೆಸಿದೆ.
ದೆಹಲಿಯ ಮದರ್ ತೆರೇಸಾ ರಸ್ತೆಯಲ್ಲಿರುವ ನಿವಾಸಕ್ಕೆ ಮೂವರು ಸದಸ್ಯರನ್ನೊಳಗೊಂಡ ತಂಡ ತೆರಳಿದ್ದು, ಅಹ್ಮದ್ ಅವರ ಹೇಳಿಕೆ ದಾಖಲಿಸಿಕೊಳ್ಳಲಿದೆ. ಸಹೋದರರ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.
ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ಪಟೇಲ್ ಗೆ ಇಡಿ ನೋಟಿಸ್ ನೀಡಿತ್ತು. ಕೋವಿಡ್ ಸಾಂಕ್ರಾಮಿಕ ಮಾರ್ಗಸೂಚಿ ಹಿನ್ನೆಲೆ ವಿಚಾರಣೆಗೆ ನಡೆದಿರಲಿಲ್ಲ. ಈ ಬಗ್ಗೆ ಪಟೇಲ್ ಅವರು ಇಡಿಗೆ ಮನವಿಯನ್ನೂ ಸಲ್ಲಿಸಿದ್ದು , ಪಟೇಲ್ ಮನವಿ ಹಿನ್ನೆಲೆ ತನಿಖಾಧಿಕಾರಿಯನ್ನು ಮನೆಗೆ ಕಳುಹಿಸಿಕೊಡುವುದಾಗಿ ಇಡಿ ಅಧಿಕಾರಿಗಳು ಹೇಳಿದ್ದಾರೆ.



