Connect with us

Dvgsuddi Kannada | online news portal | Kannada news online

ದಾವಣಗೆರೆ: ಜು.05 ರಂದು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

ಕ್ರೈಂ ಸುದ್ದಿ

ದಾವಣಗೆರೆ: ಜು.05 ರಂದು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

ಡಿವಿಜಿ ಸುದ್ದಿ, ದಾವಣಗೆರೆ: ನಗರದ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದೇ ಇರುವ ಒಟ್ಟು 42 ದ್ವಿಚಕ್ರ ವಾಹನಗಳನ್ನು ಜು.05 ರಂದು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಬಹಿರಂಗ ಹರಾಜು ಹಾಕಲಾಗುವುದು.

ವಶಪಡಿಸಿಕೊಂಡ ವಾಹನಗಳ ವಾರಸುದಾರರ ಪತ್ತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗಿದ್ದು. ವಾಹನಗಳ ವಾರಸುದಾರರು ಪತ್ತೆಯಾಗದ ಕಾರಣ ಈ ವಾಹನಗಳನ್ನು ಬಹಿರಂಗ ಹರಾಜು ಮಾಡಲು ನ್ಯಾಯಲಯದಲ್ಲಿ ಮನವಿಯನ್ನು ಸಲ್ಲಿಸಲಾಗಿತ್ತು. ನ್ಯಾಯಲಯ ಅನುಮತಿ ಹರಾಜಿಗೆ ಅನುಮತಿ ನೀಡಿದೆ. ಈ ಆದೇಶದನ್ವಯ ವಾಹನಗಳ ಪತ್ತೆಗಾಗಿ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ.

ಇದಕ್ಕೆ ಸಂಬಂಧಪಟ್ಟ ಪ್ರಾದೇಶಿಕ ಅಧಿಕಾರಿಗಳಿಂದ ವಾಹನಗಳ ಬೆಲೆ ನಿಗದಿ ಮಾಡಿದ್ದು. ದ್ವಿಚಕ್ರ ವಾಹನಗಳನ್ನು ಜು.5 ರಂದು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ನಗರದ ವಿದ್ಯಾನಗರ ಪೊಲೀಸ್ ಠಾಣೆಯ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ನಿರ್ಧರಿಸಲಾಗಿದೆ.

ಆಸಕ್ತಿ ಉಳ್ಳವರು ಹರಾಜಿನಲ್ಲಿ ಭಾಗವಹಿಸಿ ದ್ವಿಚಕ್ರ ವಾಹನ ಖರೀದಿಸಬಹುದು ಹೆಚ್ಚಿನ ಮಾಹಿತಿಗಾಗಿ ವಿದ್ಯಾನಗರ ಪೊಲೀಸ್ ಠಾಣೆ ಸಂಪರ್ಕಿಸಿ ಎಂದು ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top