Connect with us

Dvgsuddi Kannada | online news portal | Kannada news online

ಜುಲೈ ಅಂತ್ಯಕ್ಕೆ PUC, ಆಗಸ್ಟ್ ಮೊದಲ ವಾರ SSLC ಫಲಿತಾಂಶ: ಸಚಿವ ಎಸ್.‌ ಸುರೇಶ್ ಕುಮಾರ್

ಪ್ರಮುಖ ಸುದ್ದಿ

ಜುಲೈ ಅಂತ್ಯಕ್ಕೆ PUC, ಆಗಸ್ಟ್ ಮೊದಲ ವಾರ SSLC ಫಲಿತಾಂಶ: ಸಚಿವ ಎಸ್.‌ ಸುರೇಶ್ ಕುಮಾರ್

ಡಿವಿಜಿ ಸುದ್ದಿ, ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ  ನಡೆಯುತ್ತಿದೆ. ಜುಲೈ ಅಂತ್ಯಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್ ಎಸ್ ಎಲ್ ಸಿ  ಫಲಿತಾಂಶ ನೀಡಲಾಗುವುದು  ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್  ತಿಳಿಸಿದ್ದಾರೆ.

ಸುದ್ದಿಗಾರೊಂದಿಗೆ  ಮಾತನಾಡಿದ ಅವರು, ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ‌ ಯಾವ ತೊಂದರೆ ಇಲ್ಲದೆ  ನಡೆಯುತ್ತಿದೆ. ಕಳೆದ ವರ್ಷಕ್ಕೆ  ಮಕ್ಕಳ ಗೈರು ಹಾಜರಿಯಲ್ಲಿ‌ ಅಷ್ಟೊಂದು‌ ವ್ಯತ್ಯಾಸ‌ ಆಗಿಲ್ಲ. ಮಕ್ಕಳಿಗೆ‌ ಪರೀಕ್ಷಾ ಕೇಂದ್ರಗಳು ಸುರಕ್ಷಿತ ಕೇಂದ್ರಗಳಾಗಿವೆ ಎಂದರು.

ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜುಲೈ ಅಂತ್ಯಕ್ಕೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು.

ಮಕ್ಕಳು‌ ಉತ್ಸಾಹದಿಂದ ಪರೀಕ್ಷೆ ಬರೆಯುತ್ತಿದ್ದಾರೆ. ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ಪದ್ಧತಿ ಅನುಷ್ಠಾನಕ್ಕೆ ತರಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು. ತಜ್ಞರ ಅಭಿಪ್ರಾಯ ಪಡೆದ ನಂತರ‌ ಯಾವ ರೀತಿಯಲ್ಲಿ ಆನ್ ಲೈನ್ ಶಿಕ್ಷಣ ‌ಜಾರಿಗೆ ತರಬೇಕು‌ ಎಂಬುದನ್ನು‌ ನಿರ್ಧರಿಸುತ್ತೇವೆ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top