ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 4 ಗಂಟೆಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ಕಹಿ ಘಟನೆ. ಕೊರೊನಾ ಮುನ್ನೆಚ್ಚರಿಕೆ ನಡುವೆಯೇ ನಿಗದಿಯಾಗಿರುವ ಈ ಭಾಷಣ ಸಹಜವಾಗಿಯೇ ಪ್ರಾಮುಖ್ಯತೆ ಪಡೆದಿದೆ.
ಪ್ರಧಾನಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಸೋಮವಾರ ರಾತ್ರಿ 10.19ರಲ್ಲಿ ಟ್ವೀಟ್ ಮಾಡಿ ತಿಳಿಸಿದೆ. ಕೊರೊನಾ ವೈರಸ್ ಸೋಂಕು ಬಂದ ನಂತರ ದೇಶ ಉದ್ದೇಶಿಸಿ ಪ್ರಧಾನಿ ಮೋದಿ ಅವರು ಮಾಡುತ್ತಿರುವ 6ನೇ ಭಾಷಣ ಮಾಡುತ್ತಿದ್ದಾರೆ .



