ಡಿವಿಜಿಸುದ್ದಿ.ಕಾಂ, ದಾವಣಗೆರೆ: ಬೆಸ್ಕಾಂ ದಾವಣಗೆರೆ ವಿಭಾಗದ ಕಚೇರಿಯಲ್ಲಿ ಸೆ.21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಅದಾಲತ್ ಹಾಗೂ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಗ್ರಾಹಕರ ಸಂವಾದ ಸಭೆ ಆಯೋಜಿಸಿದೆ.
ಉಪವಿಭಾಗದ ವ್ಯಾಪ್ತಿಯ ಗ್ರಾಹಕರು ತಮ್ಮ ಅಹವಾಲುಗಳೇನಾದರೂ ಸಭೆಗೆ ಹಾಜರಾಗಿ ಪರಿಹರಿಸಿಕೊಳ್ಳಬಹುದು ಎಂದು ಬೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.



