ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕಟ್ಟಿ ಹಾಕಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದ್ದು, ಮೂರು ಡಿಸಿಎಂ ಹುದ್ದೆ ಸೃಷ್ಟಿಸಲು ಒಲವು ತೋರಿದೆ.
ಜಾತಿ ಮತ್ತು ಪ್ರದೇಶವಾರು ಡಿಸಿಎಂ ನೇಮಕ ಮಾಡುವ ಸಾಧ್ಯತೆ ಇದೆ. ಸಚಿವರಾದ ಗೋವಿಂದ ಕಾರಜೋಳ, ಕೆ.ಎಸ್ ಈಶ್ವರಪ್ಪ, ಡಾ. ಸಿ.ಎಸ್. ಅಶ್ವತ್ಥನಾರಾಯಣ ಹೆಸರು ಡಿಸಿಎಂ ಹುದ್ದೆಗೆ ಪ್ರಬಲವಾಗಿ ಕೇಳಿಬರುತ್ತಿವೆ.
ಸಿಎಂ ಯಡಿಯೂರಪ್ಪ ಶುಕ್ರವಾರ ದೆಹಲಿಯಲ್ಲಿ ವರಿಷ್ಠರನ್ನು ಭೇಟಿಯಾದ ವೇಳೆ ಈ ವಿಷಯ ಪ್ರಸ್ತಾಪಿಸಲಾಗಿದೆ ಎನ್ನಲಾಗುತ್ತಿದ್ದು, ಇದಕ್ಕೆ ಸಿಎಂ ಯಾವುದೇ ನೀಡಿಲ್ಲ. ಆದರೆ ಪಕ್ಷದ ಆದೇಶವನ್ನು ಯಡಿಯೂರಪ್ಪ ಪಾಲಿಸಲೇ ಬೇಕಾದ ಒತ್ತಡದಲ್ಲಿದ್ದಾರೆ ಎಂದು ಮೂಲದಿಂದ ತಿಳಿದು ಬಂದಿದೆ.