ಡಿವಿಜಿಸುದ್ದಿ.ಕಾಂ, ದಾವಣಗೆರೆ: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮವಾಗಿ ಸ್ಪರ್ಧಿಸಿ ರಾಜ್ಯ, ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಬಸವರಾಜ್ ಕ್ರೀಡಾಪಟುಗಳಿಗೆ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 2019-20 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾಕೂಟದಲ್ಲಿ ತಿರ್ಪುಗಾರರ ಜವಾಬ್ದಾರಿ ಪ್ರಮುಖವಾಗಿದ್ದು, ತೀರ್ಪುಗಾರರು ಯಾವುದೇ ಪೂರ್ವಾಗ್ರಹ ಪೀಡಿತ ಭಾವನೆಗಳಿಗೆ ಒಳಗಾಗದೇ ನ್ಯಾಯಸಮ್ಮತವಾಗಿ ತೀರ್ಪು ನೀಡಬೇಕು ಎಂದರು.
ಅಥ್ಲೆಟಿಕ್ಸ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಬ್ಯಾಸ್ಕೆಟ್ ಬಾಲ್, ಬ್ಯಾಡ್ಮಿಟನ್, ಥ್ರೋಬಾಲ್, ಕುಸ್ತಿ, ಶಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಫುಟ್ಬಾಲ್, ಹಾಕಿ, ಟೆನ್ನಿಸ್ ಹಾಗೂ ಈಜು ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಸಕ ಎಸ್.ಎ. ರವೀಂದ್ರನಾಥ್ ಉಪಸ್ಥಿತರಿದ್ದರು.