ಡಿವಿಜಿಸುದ್ದಿ.ಕಾಂ, ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ಸೆ. 15 ರಂದು ಬೆಳಿಗ್ಗೆ 11 ಗಂಟೆಗೆ 15ನೇ ಕನ್ನಡ ವಿಜ್ಞಾನ ಸಮ್ಮೇಳನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯವಿಜ್ಞಾನ ಪುರಸ್ಕಾರ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಇಂದ್ರೇಶ್.ಕೆ.ಎಂ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ದಾವಣಗೆರೆ ವಿಶ್ವ ವಿದ್ಯಾನಿಲಯದ ಕುಲಪತಿ ಡಾ.ಶರಣಪ್ಪ ವಿ ಹಲಸೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸ್ವದೇಶಿ ವಿಜ್ಞಾನ ಆದೋಲನಾ ಕಾರ್ಯಾಧ್ಯಕ್ಷರಾದ ಕ್ಯಾ. ಗಣೇಶ್ ಕಾರ್ಣಿಕ್, ಗುಲ್ಬರ್ಗ ವಿಶ್ವ ವಿದ್ಯಾಲಯದ ನಿವೃತ್ತ ಕುಲಪತಿ ಈ.ಟಿ. ಪುಟಯ್ಯ, ಕುವೆಂಪು ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಪಿ.ವೀರಭದ್ರಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.



