ಡಿವಿಜಿಸುದ್ದಿ.ಕಾಂ, ದಾವಣಗೆರೆ, ೨೦೧೯-೨೦ನೇ ಸಾಲಿನಲ್ಲಿ ಜಿಲ್ಲೆಯ ಬೆಳೆ ಸಮೀಕ್ಷೆಯ ಮಾಹಿತಿಯುಳ್ಳ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ಬಿಡುಗಡೆ ಮಾಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮೀಕ್ಷಾ ವರದಿ ಬಿಡುಗಡೆಗೊಳಿಸಲಾಯಿತು. ವರದಿಯಿಂದ ಜಿಲ್ಲೆಯಲ್ಲಿ ರೈತರು ಬೆಳೆದ ಸಂಪೂರ್ಣ ಮಾಹಿತಿ ರೈತರಿಗೆ ಸುಲಭವಾಗಿ ಸಿಗಲಿದೆ. ಜಿಲ್ಲೆಯ ವಿದ್ಯಾವಂತ ಯುವಕರಿಂದ ಮಾಹಿತಿ ಸಂಗ್ರಹಿಸಿ ಪೋಸ್ಟರ್ ತಯಾರಿಸಲಾಗಿದ್ದು, ಈ ವರದಿ ಬೆಳೆ ವಿಮೆ, ಕನಿಷ್ಠ ಬೆಂಬಲ ಬೆಲೆ, ಬೆಳ ನಷ್ಟ ಪರಿಹಾರ ಇತ್ಯಾದಿ ಯೋಜನೆಗಳಿಗೆ ಉಪಯೋಗವಾಗಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ತಿಳಿಸಿದರು.
ಆ್ಯಪ್ ನಲ್ಲಿ ಬೆಳೆ ಸಮೀಕೆ
ಗೂಗಲ್ ಪ್ಲೇ ಸ್ಟೋರ್ ನಲ್ಲಿ ಬೆಳೆ ದರ್ಶಕ್ ಎಂದು ನಮೂದಿಸಿ ಆ್ಯಪ್ ಡೌನೋಡ್ ಮಾಡಿಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನು ಛಾಯಾಚಿತ್ರ ಸಮೇತವಾಗಿ ಪರಿಶೀಲಿಸಿಕೊಳ್ಳಬಹುದಾಗಿದೆ. ಹಾಗೂ ತಮ್ಮ ಆಕ್ಷೇಪಣೆಗಳಿದ್ದಲ್ಲಿ ಮೆಸೇಜ್ ಅಥವಾ ಧ್ವನಿಮುದ್ರಣದ ಮೂಲಕ ದಾಖಲಿಸಬಹುದಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಉಪವಿಭಾಗಾಧಿಕಾರಿ ಕುಮಾರಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ವಿಶೇಷ ಭೂಸ್ವಾಧೀನಾಧಿಕಾರಿ ರೇಷ್ಮಾ ಹಾನಗಲ್, ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಬಿ. ಮುದುಗಲ್, ಜಗಳೂರು ತಹಶೀಲ್ದಾರ್ ತಿಮ್ಮಣ್ಣ, ದಾವಣಗೆರೆ ತಾಲೂಕು ತಹಶೀಲ್ದಾರ್ ಸಂತೋಷ್ ಕುಮಾರ್ ಉಪಸ್ಥಿತರಿದ್ದರು.
ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 9844460336,7483892205