ಡಿವಿಜಿಸುದ್ದಿ, ಕಾಂ, ದಾವಣಗೆರೆ: ಮಾಜಿ ಸಚಿವ, ಕಾಂಗ್ರೆಸ್ ಪ್ರಭಾವಿ ಮುಖಂಡ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧನ ವಿರೋಧಿಸಿ ಇವತ್ತು ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ನೇತೃತ್ವದಲ್ಲಿ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು, ಯುವ ಘಟಕ ಕಾರ್ಯಕರ್ತರು ಕೇಂದ್ರ ಸರ್ಕಾರ ಮತ್ತು ಜಾರಿ ನಿರ್ದೇಶನಾಲಯ (ಇಡಿ ) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ಡಿ.ಕೆ.ಶಿವಕುಮಾರ ಪರ ಘೋಷಣೆ ಕೂಗಿದರು. ರಸ್ತೆ ಮಧ್ಯೆ ಟೈಯರ್ ಗೆ ಬೆಂಕಿ ಹಚ್ಚಿ ಕೇಂದ್ರ ಗೃಹ ಸಚಿವ ಅಮಿತ್ ಷಾ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಕಾಂಗ್ರೆಸ್ ಮುಖಂಡರ ವಿರುದ್ಧ ಇಡಿ , ಐಟಿ , ಸಿಬಿಐ ಮೂಲಕ ಕಾಂಗ್ರೆಸ್ ಮುಖಂಡರನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ. ಈ ಮೂಲಕ ಬಿಜೆಪಿ ದೇಶದಲ್ಲಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಚ್.ಬಿ. ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ದಿನೇಶ್ ಶೆಟ್ಟಿ, ಕಾಂಗ್ರೆಸ್ ಮುಖಂಡ ಡಿ. ಬಸವರಾಜ್ ಸೇರಿದಂತೆ ಕಾಂಗ್ರೆಸ್ ಯುವ ಮುಖಂಡರು ಭಾಗಿಯಾಗಿದ್ರು.
ಸುದ್ದಿ ಮತ್ತು ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 9844460336, 7483892205



