ಡಿವಿಜಿಸುದ್ದಿ.ಕಾಂ, ದಾವಣಗೆರೆ: ದಾವಣಗೆರೆ ತಾಲ್ಲೂಕು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದ 28 ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮಹಾತೇಂಶ್ ಬೀಳಗಿ ನೋಟಿಸ್ ಜಾರಿ ಮಾಡಿದ್ದಾರೆ.
ಇಂದು ಬೆಳಿಗ್ಗೆ ದಾಣಗೆರೆ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅಧಿಕಾರಿಗಳ ನಿರ್ಲಕ್ಷವನ್ನು ಪ್ರತ್ಯೇಕವಾಗಿ ಕಂಡು ಶಿಸ್ತು ಕ್ರಮ ಕೈಗೊಂಡಿದ್ದಾರೆ. ನಿಗದಿತ ಸಮಯಕ್ಕೆ ಕಚೇರಿ ಬಾರದಿದ್ದ 28 ಸಿಬ್ಬಂದಿಗಳಿಗೆ ನೋಟಿಸ್ ಜಾರಿಮಾಡಿದ್ದಾರೆ.
ಭೇಟಿ ವೇಳೆ ಸಾರ್ವಜನಿಕರು ನೀಡಿದ ದೂರು ಕಂಡು ಜಿಲ್ಲಾಧಿಕಾರಿಗಳ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು. ನೀವು ಈ ರೀತಿ ಕೆಲಸ ಮಾಡಿದ್ರೆ, ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸುವುದು ಹೇಗೆ ಎಂದು ಸಿಬ್ಬಂದಿಗಳನ್ನು ಕೇಳಿದಾಗ ಅಧಿಕಾರಿಗಳು ಗಪ್ ಚುಪ್ ಆಗಿದ್ದರು.
ಇಂತಹ ಪ್ರಕರಣಗಳು ಮತ್ತೆ ಮರುಕಳಿಸಿದರೆ ಅಂತಹ ನೌಕರರ ವಿರುದ್ಧ ಕಾನೂನು ರೀತಿಯ ಶಿಸ್ತಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಜತೆಗೆ ಕರ್ತವ್ಯ ಲೋಪವೆಸಗಿದ ಸಿಬ್ಬಂದಿಗಳ ಸಂಬಳ ತಡೆ ಹಿಡಿಯಲಾಗವುದು ಎಂದು ಎಚ್ಚರಿಸಿದರು.

ಆಧಾರ್ ಕೇಂದ್ರದ ಬಳಿ ಉದ್ದನೆಯ ಸರತಿ ಸಾಲಿನಲ್ಲಿ ನಿಂತ್ತಿದ್ದ ಪುಟ್ಟ ಮಕ್ಕಳೊಂದಿಗೆ ಬಂದ ಮಹಿಳೆಯರ ಅಹವಾಲು ಆಲಿಸಿ, ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸುವಂತೆ ಸಿಬ್ಬಂದಿಗಳಿಗೆ ಸೂಚಿಸಿದರು. ನಗರದ ವಿವಿಧ ಬ್ಯಾಂಕ್ ಹಾಗೂ ಪೋಸ್ಟ್ ಆಫೀಸ್‌ಗಳಲ್ಲಿ ಆಧಾರ್ ಕೇಂದ್ರಗಳಿದ್ದು ಅಲ್ಲಿ ಕೂಡ ಆಹಾರ ಕಾರ್ಡ್ ಮಾಡಿಸಿಕೊಳ್ಳಬಹುದೆಂದು ಮಾಹಿತಿ ನೀಡಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಿಗೆ ದಿಢೀರ್ ಭೇಟಿಯನ್ನು ಯಾವ ಸಮಯದಲ್ಲಾದರೂ ನೀಡಿ, ಕರ್ತವ್ಯ ಲೋಪ ಮತ್ತು ಗೈರು ಹಾಜರಾತಿ ಕಂಡುಬಂದಲ್ಲಿ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ:9844460336, 7483892205



