Connect with us

Dvgsuddi Kannada | online news portal | Kannada news online

ಡಿಕೆಶಿಗೆ ಜಾಮೀನು ನಿರಾಕರಣೆ

ರಾಷ್ಟ್ರ ಸುದ್ದಿ

ಡಿಕೆಶಿಗೆ ಜಾಮೀನು ನಿರಾಕರಣೆ

ಡಿವಿಜಿಸುದ್ದಿ.ಕಾಂ, ಹೊಸದಿಲ್ಲಿಅಕ್ರಮ ಆಸ್ತಿ ಪತ್ತೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿ ವಜಾಗೊಂಡಿದೆ.  ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಇನ್ನು  ಡಿ.ಕೆ ಶಿವಕುಮಾರ್  ತಿಹಾರ್ ಜೈಲಿನಲ್ಲಿಯೇ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ.

ಮೂರು ದಿನಗಳ ಕಾಲ ನಡೆದ ವಾದ-ಪ್ರತಿವಾದ ಅಂತ್ಯಗೊಂಡ ನಂತರ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದು, ಡಿಕೆಶಿಗೆ ಜಾಮೀನು ನಿರಾಕರಿಸಿದೆ. ಒಂದೇ ವ್ಯಾಕ್ಯದಲ್ಲಿ ಆದೇಶ  ನೀಡಿದ ನ್ಯಾಯಧೀಶರು, ಜಾಮೀನು ನೀಡಲು ನಿರಾಕರಿಸಿದರು. ನ್ಯಾಯಾಧೀಶ ಅಜಯ್‌ ಕುಮಾರ್‌ ಕುಹರ್‌ ಅರ್ಜಿ ವಿಚಾರಣೆ ನಡೆಸುತ್ತಿದ್ದರು.

ಜಾಮೀನು ಅರ್ಜಿ ತಿರಸ್ಕರಿಸಿದ್ದರಿಂದ ಡಿ.ಕೆ. ಶಿವಕುಮಾರ್ ನಾಳೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top