ಡಿವಿಜಿಸುದ್ದಿ.ಕಾಂ ದಾವಣಗೆರೆ: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಇಡಿ ಬಂಧಿಸಿರುವುದನ್ನು ವಿರೋಧಿಸಿ ಬೆಂಗಳೂರು ಬಂದ್ ಕರೆ ನೀಡಿರುವುದು ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆಗುತ್ತದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.
ದಾವಣಗೆರೆಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಂದ್ ಮತ್ತು ಪ್ರತಿಭಟನೆಗಳು ನಡೆಯುವುದರಿಂದ ಅಮಾಯಕ ಕಾರ್ಯಕರ್ತರನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನವಾಗುತ್ತದೆ. ಹೀಗಾಗಿ ಇದೊಂದು ನ್ಯಾಯಾಂಗ ನಿಂಧನೆ ಕೇಸ್ ಆಗಲಿದೆ ಎಂದರು.
ಡಿಕೆಶಿ ಬಂಧನದ ಹಿಂದೆ ಬಿಜೆಪಿ ಕೈವಾಡವಿಲ್ಲ. ಇದು ಕಾಂಗ್ರೆಸ್ ಕುತಂತ್ರದಿಂದ ಡಿಕೆಶಿ ಕೊರಳಿಗೆ ಉರಳು ಸುತ್ತಿಕೊಳ್ಳುತ್ತಿದೆ. ಕಾಂಗ್ರೆಸ್ ನಲ್ಲಿ ಪ್ರಭಾವಿ ನಾಯಕ ಡಿಕೆಶಿ ಅವರು ಹೊರಬಂದ್ರೆ ನಾಯಕತ್ವ ಕೊಡಬೇಕಾಗುತ್ತದೆ ಎಂದು ಕಾಂಗ್ರೆಸ್ ಮುಖಂಡರು ಇಷ್ಟೆಲ್ಲಾ ಮಾಡುತ್ತಿದ್ದಾರೆ.
ಡಿಕೆಶಿ ಬಗ್ಗೆ ನಮಗೆ ಅನುಕಂಪ ಇದೆ. ಅವರು ಆದಷ್ಟು ಹೊರಬರಬೇಕು ಎಂದು ನಾನು ಹಾರೈಸುತ್ತೇನೆ ಎಂದು ಹೇಳಿದರು.
ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ:9844460336, 7483892205