ಡಿವಿಜಿ ಸುದ್ದಿ.ಕಾಂ, ದಾವಣಗೆರೆ: ಆದಿಕರ್ನಾಟಕ ವಿದ್ಯಾಭಿವೃದ್ಧಿ ಸಂಘವು ಡಾ. ಬಿ.ಆರ್. ತಿಪ್ಪೇಸ್ವಾಮಿ ಸಂಯುಕ್ತ ಪದವಿ ಕಾಲೇಜ್ ಹಾಗೂ ಪ್ರೌಢ ಶಾಲೆಯ ಮಹಾತ್ಮ ಗಾಂಧಿ ವಿದ್ಯಾರ್ಥಿ ನಿಲಯದ ವಜ್ರ ಮಹೋತ್ಸವ ಮತ್ತು ಮಹಾತ್ಮ ಗಾಂಧಿಜಿ ಅವರ 151 ನೇ ಜಯಂತಿಯನ್ನು ಅ.2 ರಂದು ಮಹಾತ್ಮ ಗಾಂಧಿ ಸ್ಮಾರಕ್ ಹಾಸ್ಟೆಲ್ ನಲ್ಲಿ ಆಯೋಜಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಲ್.ಎಂ. ಹನುಮಂತಪ್ಪ, ಅ.2 ರಂದು ಬುಧವಾರ ಮಧ್ಯಾಹ್ನ 12.30 ಕ್ಕೆ ಮಹಾತ್ಮ ಗಾಂಧಿಜಿ ಅವರ 151ನೇ ದಿನಾಚರಣೆ ಮತ್ತು ಮಹಾತ್ಮ ಗಾಂಧಿ ವಿದ್ಯಾರ್ಥಿ ನಿಲಯದ ವಜ್ರ ಮಹೋತ್ಸವ ಕಾರ್ಯಕ್ರಮ ಆಯೋಜಿಸಿದ್ದೇವೆ. ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಚಿತ್ರದುರ್ಗದ ಶ್ರೀ ಮಾದಾರ ಚನ್ನಯ್ಯ ಸ್ವಾಮಿಜಿ, ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ, ಆದಿಜಾಂಬವ ಪೀಠದ ಶ್ರೀ ಷಡಕ್ಷರಮುನಿಗಳು ವಹಿಸಿಕೊಳ್ಳಲಿದ್ದು, ಉದ್ಘಾಟನೆಯನ್ನು ಶಾಸಕ ಶಾಮನೂರು ಶಿವಶಂಕರಪ್ಪ ನೆರವೇರಿಸಲಿದ್ದಾರೆ. ಆದಿಕರ್ನಾಟಕ ವಿದ್ಯಾಭಿವೃದ್ಧಿ ಸಂಘದ ನಿರ್ದೇಶಕ ಪಿಎಚ್ ಡಿ ಪುರಸ್ಕೃತ ಡಾ.ಸಿ ವರದರಾಜ್ ಅವರಿಗೆ ಸನ್ಮಾನಿಸಲಾಗುವುದು ಎಂದರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಎಸ್.ಎ ರವೀಂದ್ರನಾಥ್, ಪ್ರೊ. ಲಿಂಗಣ್ಣ ವೈ.ಎ ನಾರಾಯಣಸ್ವಾಮಿ, ಮಾಜಿ ಶಾಸಕ ಎಸ್.ಎಸ್ ಮಲ್ಲಿಕಾರ್ಜುನ್, ಮಾಜಿ ಶಾಸಕ ಎಚ್.ಎಸ್ . ಶಿವಶಂಕರ್, ಪರಿಷತ್ ಸದಸ್ಯರಾದ ಕೆ. ಅಬ್ದುಲ್ ಜಬ್ಬಾರ್, ಮೋಹನ್ ಕೊಂಡಜ್ಜಿ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಪದ್ಮ ಬಸವಂತಪ್ಪ ಪಾಲಿಕೆ ಆಯುಕ್ತ ಮುಂಜುನಾಥ್ ಬಳ್ಳಾರಿ, ವರದಿಗಾರ ಕೂಟದ ಅಧ್ಯಕ್ಷ ಬಿ.ಎನ್. ಮಲ್ಲೇಶ್ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಬಿ.ಎಂ. ಈಶ್ವರಪ್ಪ, ಕಾರ್ಯದರ್ಶಿ ವೀರಭದ್ರಪ್ಪ, ಜಂಟಿ ಕಾರ್ಯದರ್ಶಿ ಗಂಗಾಧರಪ್ಪ ಡಿ, ವಕೀಲ ಎ.ಕೆ ನಾಗಪ್ಪ ಉಪಸ್ಥಿತರಿದ್ದರು.



