Connect with us

Dvg Suddi-Kannada News

ಕೊರೊನಾ ವೈರಸ್ ಭೀತಿ: 5 ವರ್ಷದೊಳಗಿನ ಶಾಲಾ ಮಕ್ಕಳಿಗೆ ಒಂದು ತಿಂಗಳು ರಜೆ ಘೋಷಿಸಿದ ಸರ್ಕಾರ 

ಪ್ರಮುಖ ಸುದ್ದಿ

ಕೊರೊನಾ ವೈರಸ್ ಭೀತಿ: 5 ವರ್ಷದೊಳಗಿನ ಶಾಲಾ ಮಕ್ಕಳಿಗೆ ಒಂದು ತಿಂಗಳು ರಜೆ ಘೋಷಿಸಿದ ಸರ್ಕಾರ 

ಡಿವಿಜಿ ಸುದ್ದಿ, ಬೆಂಗಳೂರು: ದೇಶದಾದ್ಯಂತ ಕೊರೊನಾ ವೈರಸ್ ಆತಂಕ ಹೆಚ್ಚಿಸಿದ  ಹಿನ್ನೆಲೆಯಲ್ಲಿ 5 ವರ್ಷದೊಳಗಿನ  ಶಾಲೆಗೆ ಹೋಗುವ ಮಕ್ಕಳಿಗೆ ಒಂದು ತಿಂಗಳು ರಜೆ ಕೊಡಲಾಗುವುದು ಎಂದು ವೈದ್ಯಕೀಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರೊಂದಿಗೆ ಮಾತನಾಡಿದ ಸಚಿವರು, ಚಿಕ್ಕ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರಲಿದೆ. ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವೈದ್ಯಕಿಯ ಇಲಾಖೆ ಜೊತೆ ಸಮಲೋಚಿಸಿ  ರಜೆ ಘೋಷಿಸಲು ನಿರ್ಧಾರ  ಕೈಗೊಳ್ಳಲಾಗಿದೆ. ಈಗಾಗಲೇ ಮುನ್ನೆಚ್ಚರಿಕೆ ಮತ್ತು ಮಾರ್ಗಸೂಚಿಯನ್ನು ನೀಡಿದ್ದೇವೆ ಎಂದು ತಿಳಿಸಿದರು.

5 ವರ್ಷದೊಳಗಿನ ಮಕ್ಕಳಿಗೆ ಮಾರ್ಚ್ 31ರವರೆಗೆ ರಜೆ ಘೋಷಿಸಲಾಗಿದೆ. ಹೀಗಾಗಿ ಬೇಸಿಗೆ ರಜೆ ಮುಗಿದ ನಂತರವೇ 5 ವರ್ಷದೊಳಗಿನ ಮಕ್ಕಳಿಗೆ ಶಾಲೆ ಆರಂಭವಾಗಲಿವೆ. ಪ್ರಿನರ್ಸರಿ, ಎಲ್‍ಕೆಜಿ ಮತ್ತು ಯುಕೆಜಿ ಕಲಿಯುತ್ತಿರುವ ರಾಜ್ಯದ ಎಲ್ಲ ಮಕ್ಕಳಿಗೆ ರಜೆ ಸಿಗಲಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್, ಆರೋಗ್ಯ ಆಯುಕ್ತರ ಸಲಹೆ ಮೇರೆಗೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ ಯುಕೆಜಿ, ಎಲ್‍ಕೆಜಿ ಶಾಲೆಗಳಿಗೆ ಇಂದಿನಿಂದ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದರು.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top