ಡಿವಿಜಿಸುದ್ದಿ.ಕಾಂ, ಬೆಂಗಳೂರು: ಸಚಿವ ಸ್ಥಾನ ಸಿಗದೆ ಬೇ ಸರಗೊಂಡಿದ್ದ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯಗೆ ಆದೃಷ್ಟ ಕೂಡಿ ಬಂದಿದೆ. ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಲಾಗಿದೆ.

ರೇಣುಕಾಚಾರ್ಯ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿರಲಿದ್ದಾರೆ. ಇತ್ತೀಚೆಗಷ್ಟೇ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಲಾಗಿತ್ತು. ಅದರ ಬೆನ್ನಲ್ಲೇ ಇದೀಗ ರೇಣುಕಾಚಾರ್ಯಗೂ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ.



