Connect with us

Dvgsuddi Kannada | online news portal | Kannada news online

ಜನಸ್ಪಂದನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಮಹಾಪೂರ

ದಾವಣಗೆರೆ

ಜನಸ್ಪಂದನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಮಹಾಪೂರ

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಜನರು ನಮ್ಮ ಬಳಿ ಸಮಸ್ಯೆ ಹೊತ್ತು ತರುವುದಲ್ಲ. ನಾವೇ ಅವರ ಬಳಿ ಹೋಗಿ ಸಮಸ್ಯೆಗೆ ಪರಿಹಾರ ನೀಡಬೇಕು. ಮುಂದಿನ ದಿನಗಳಲ್ಲಿ 15 ದಿನಗಳಿಗೊಮ್ಮೆ ಜನರ ಬಳಿಯೇ ಹೋಗಿ ಸಮಸ್ಯೆ ಬಗೆಹರಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೆಶ್ ಬೀಳಗಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಲಾಗಿದ್ದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರು ತಮ್ಮ ಸಂಕಷ್ಟಗಳನ್ನು ಹೇಳಿಕೊಳ್ಳಲು ತುಂಬ ದೂರದಿಂದ ಬರುತ್ತಿದ್ದಾರೆ. ಆದರೆ ಜಿಲ್ಲೆಯ ಜನತೆಯ ಸಾಮಾನ್ಯವಾದ ಕುಂದುಕೊರತೆ, ಸಮಸ್ಯೆಗಳನ್ನು ಅರಿತು ಕೆಲಸ ಮಾಡುವಂತಾಗಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಒಂದು ತಂಡವನ್ನು ರಚಿಸಿ ೧೫ ದಿನಗಳಿಗೊಮ್ಮೆ ಜನರಿರುವ ಬಳಿಯೇ ಹೋಗಿ ಇಂತಹ ಸಮಸ್ಯೆಗಳನ್ನು ಬಗೆಹರಿಸುವಂತಾಗಬೇಕು. ಈಲ್ಲೆಯ ವಿವಿಧ ಭಾಗದಿಂದ ೧೬ ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು.

ಜಿಲ್ಲೆಯಲ್ಲಿ ಸುಮಾರು 900 ಕ್ಕೂ ಹೆಚ್ಚು ವೈದ್ಯಕೀಯ ಘಟಕಗಳಿದ್ದು ಕೆಲವು ಪ್ರಯೋಗಾಲಯಗಳು ಹಾಗೂ ವೈದ್ಯರು ಕೆ.ಪಿ.ಎಂ.ಇ ಕಾಯ್ದೆಯಡಿ ನೋಂದಣಿಯಾಗಿಲ್ಲ. ಅಲ್ಲದೇ ವೈದ್ಯಕೀಯ ತಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲಾಗುತ್ತಿಲ್ಲ. ನಗರದಲ್ಲಿ ನಕಲಿ ವೈದ್ಯರ ಹಾವಳಿ ಸಹ ಹೆಚ್ಚಾಗಿದ್ದು, ಇವರುಗಳನ್ನು ಪತ್ತೆ ಹಚ್ಚಿ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಎಂ.ಜಿ.ಶ್ರೀಕಾಂತ್ ಎಂಬುವವರು ಮನವಿ ಮಾಡಿದರು.
ನಿಯಮ ಉಲ್ಲಂಘಿಸುವ ವೈದ್ಯಕೀಯ ಘಟಕಗಳು ಹಾಗೂ ನಕಲಿ ವೈದ್ಯರ ಬಗ್ಗೆ ಮಾಹಿತಿಯಿದ್ದರೆ ನೀಡಿ. ಜಿಲ್ಲಾಡಳಿತ ಮತ್ತು ಆರೋಗ್ಯ ಅಧಿಕಾರಿಗಳೊಂದಿಗೆ ತಂಡವನ್ನು ರಚಿಸಿ ಪತ್ತೆ ಹಚ್ಚುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಎಸ್‌ಒಜಿ ಕಾಲೋನಿ, ರಾಮನಗರ, ಬಸವ ಬುದ್ಧ ನಗರ, ಪಾಮೇನಹಳ್ಳಿ ಕಳೆದ ೨೦ ವರ್ಷಗಳಿಂದ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಇದಕ್ಕಾಗಿ ಪಾಲಿಕೆಗೆ ಸಾಕಷ್ಟು ಬಾರಿ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸೂಕ್ತವಾಗಿ ಬೀದಿ ದೀಪಗಳ ವ್ಯವಸ್ಥೆ ಇಲ್ಲ. ಇದರಿಂದ ಅನೇಕ ಅನೈತಿಕ ಘಟನೆಗಳುನಡೆಯುತ್ತಿವೆ. ಆದ್ದರಿಂದ ತಾವುಗಳು ಕಾಲೋನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಸೌಕರ್ಯಗಳನ್ನು ಒದಗಿಸುವಂತೆ ವಿವಿಧ ಸಂಘಟನೆ ಮುಖಂಡರು ಮನವಿ ಮಾಡಿದರು.

ನಗರದಲ್ಲಿ ಮೊದಲು 41 ವಾರ್ಡ್ಗಳಿದ್ದವು ಈಗ 45  ವಾರ್ಡ್ಗಳಾಗಿವೆ. ಅನುದಾನದ ಲಭ್ಯತೆ ಮೇಲೆ ಸೂಕ್ತ ಸೌಕರ್ಯ ಒದಗಿಸಲಾಗುತ್ತಿದೆ ಎಂದು ನಗರಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ ಹೇಳಿದರು. ಹಿಂದೆ ಆಗಿರುವುದನ್ನು ಬಿಡಿ, ಮುಂಬರುವ ದಿನಗಳಲ್ಲಿ ಸಮಸ್ಯೆ ಇರುವ ಪ್ರದೇಶಗಳಿಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಡಿಸಿ ಎಚ್ಚರಿಕೆ ನೀಡಿದರು.

ನಗರ ಹೆಚ್.ಕೆ.ವಿಶ್ವರಾಜು ಎಂಬುವವರು ನನಗೆ ಕಳೆದ ೭ ವರ್ಷಗಳಿಂದ ದೇಹದ ಬಲ ಭಾಗವು ಕಾಲಿನಿಂದ ತಲೆಯವರೆಗೆ ಶಕ್ತಿ ಇರುವುದಿಲ್ಲ. ಸಾಕಷ್ಟು ದೈಹಿಕ ಮತ್ತು ಮಾನಸಿಕ ಹಿಂಸೆಯಾಗುತ್ತಿದೆ. ಅಲ್ಲದೇ ಮಾಟ ಮಂತ್ರ ಇರಬಹುದು ಎಂದು ಹೇಳಿ ಒಂದು ಲಕ್ಷಕ್ಕೂ ಅಧಿಕ ಹಣವನ್ನು ವ್ಯರ್ಥ ಮಾಡಿಕೊಂಡಿದ್ದೇನೆ. ನನ್ನ ಆರೋಗ್ಯ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಚೀಗಟೇರಿ ಆಸ್ಪತ್ರೆಯ ಅಧೀಕ್ಷಕರನ್ನು ಸಭೆಗೆ ಕರೆಸಿ ಈ ವ್ಯಕ್ತಿಯ ಆರೋಗ್ಯದ ಸಮಸ್ಯೆಯನ್ನು ಪರೀಕ್ಷಿಸಿ ಮುಂದೆ ಏನು ಮಾಡಬೇಕು ಎಂಬುದನ್ನು ತೀರ್ಮಾನ ಕೈಗೊಳ್ಳೊಣ ಎಂದರು.

ತಮ್ಮ ಮನೆಯ ಇ-ಸ್ವತ್ತು ಮಾಡಿಕೊಡಲು ಗ್ರಾಮ ಪಂಚಾಯತಿ ಕಾರ್ಯದರ್ಶಿ ನಾಗರಾಜ್ ಎಂಬುವವರು ತಮ್ಮೊಂದಿಗೆ ಅನುಚಿತವಾಗಿ ಮಾತನಾಡಿದ್ದಾರೆ ಎಂದು ಹೊನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳೆ ಅಳಲು ತೋಡಿಕೊಂಡರು. ಈ ಹಿಂದೆ ನೀವು ನನ್ನ ಭೇಟಿ ನೀಡಿದಾಗ ಸರ್ವೆ ಕಾರ್ಯ ನಡೆಸಿ ಇ-ಸ್ವತ್ತು ಮಾಡಿಕೊಡುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದ್ದೆ, ಆದರೂ ಕೆಲಸ ಮಾಡಿಲ್ಲ. ಆ ಪಂಚಾಯತಿ ಕಾರ್ಯದರ್ಶಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡುವಂತೆ ಸೂಚಿಸಿದರು. ಕೊನೆಗೆ ಸಭೆಗೆ ಹಾಜರಾದ ನಾಗರಾಜು, ದುರ್ವರ್ತನೆ ತೋರಿ ಕರ್ತವ್ಯ ಲೋಪವೆಸಗಿದಲ್ಲಿ ಶಿಸ್ತಿನ ಕ್ರಮ ಜರುಗಿಸುತ್ತೇನೆಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ಮಹಾನಗರಪಾಲಿಕೆ ವ್ಯವಸ್ಥಾಪಕರಾದ ಅನ್ನಪೂರ್ಣ ಎಂಬುವವರು ಸರ್ಕಾರಕ್ಕೆ ವಂಶವೃಕ್ಷದ ಸುಳ್ಳು ದಾಖಲೆಗಳನ್ನು ನೀಡಿ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ದಾಖಲೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಎಂ.ಎಸ್.ಮಲ್ಲಿಕಾರ್ಜುನ ಎಂಬುವವರು ಮನವಿ ಮಾಡಿದರು.ಆಯುಕ್ತರಿಗೆ ಈ ಕುರಿತು ಖುದ್ದಾಗಿ ಪರಿಶೀಲನೆ ನಡೆಸಿ ಸುಳ್ಳು ದಾಖಲೆಗಳು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹರಲಿಪುರ ಕೆನರಾಬ್ಯಾಂಕ್ ನಲ್ಲಿ ಚಿನ್ನಾಭರಣ ಮತ್ತು ಬೆಳೆ ಮೇಲೆ ಸಾಲ ತೆಗೆದುಕೊಂಡಿದ್ದು, ಬೆಳೆಸಾಲ ಮನ್ನಾ ಆಗಿರುವುದಿಲ್ಲ. ಚಿನ್ನಾಭರಣದ ಸಾಲದ ಮೊತ್ತವನ್ನು ನಾವು ಕಟ್ಟುವುದಾಗಿ ತಿಳಿಸಿದರೂ ಸಹ ಬ್ಯಾಂಕ್ ನವರು ಚಿನ್ನಾಭರಣಗಳನ್ನು ನೀಡುತ್ತಿಲ್ಲ. ಸದ್ಯದಲ್ಲೆ ಮನೆಯಲ್ಲಿ ಮದುವೆ ಕಾರ್ಯವಿದ್ದು, ಚಿನ್ನಾಭರಣ ಬಿಡಿಸಿಕೊಡಬೇಕೆಂದು ಕುಂಬಳೂರು ಗ್ರಾಮದ ಕೆ.ಹನುಮಂತಪ್ಪ ಮನವಿ ಮಾಡಿದರು. ಬ್ಯಾಂಕ್ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ತಿಳಿಸಲಾಗುವುದು ಎಂದರು.

ತುಂಗಭದ್ರ ಬಡಾವಣೆಯ ಕೆಎಚ್‌ಬಿ ಕಾಲೋನಿಯಲ್ಲಿ ಮೂಲಸೌಕರ್ಯಗಳಿಲ್ಲದೆ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ವಿದ್ಯುತ್ ದೀಪ ಸಮಸೆ, ಸರಿಯಾಗಿ ಕಸ ವಿಲೇವಾರಿ ಆಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗೆಳಿಗೆ ದೂರು ನೀಡಿದರೆ, ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಕಾಲೋನಿಯಲ್ಲಿ ಅನೈತಿಕ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಈ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳ ಸೂಕ್ತ ಕ್ರಮ ಕೈಗೊಳಳ್ಳುವ ಭರವಸೆ ನೀಡಿದರು.

ಸಭೆಯಲ್ಲಿ ಉಪವಿಭಾಗಧಿಕಾರಿ ಬಿ.ಟಿ,.ಕುಮಾರಸ್ವಾಮಿ, ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ಶಿವಾನಂದ್ ಕುಂಬಾರ್, ವಿಶೇಷ ಭೂಸ್ವಾಧೀನಾಧಿಕಾರಿ ರೇಷ್ಮಾ ಹಾನಗಲ್, ತಹಶೀಲ್ದಾರ್ ಸಂತೋಷ್ ಕುಮಾರ್, ಡಿಹೆಚ್‌ಒ ಡಾ.ರಾಘವೇಂದ್ರಸ್ವಾಮಿ, ಡಿಎಸ್ ಡಾ.ನಾಗರಾಜ್ ಜಿಲ್ಲಾ ಅಂಬೇಡ್ಕರ್ ಅಭಿವೃದ್ಧಿ ನಿಗಮ ವ್ಯವಸ್ಥಾಪಕಿ ರೇಷ್ಮ ಕೌಸರ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top