ಡಿವಿಜಿ ಸುದ್ದಿ, ಬೆಂಗಳೂರು: ಕೆಪಿಎಸ್‌ಸಿ ಎ, ಬಿ ದರ್ಜೆಯ ವೈದ್ಯ ಮತ್ತು ಎಂಜಿನಿಯರ್‌ನಂತಹ ಹುದ್ದೆಗಳಿಗೆ ಸಂದರ್ಶನ ನಡೆಸದೇ ಲಿಖಿತ ಪರೀಕ್ಷೆ ಮೂಲಕವೇ ಆಯ್ಕೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಈ ಮೂಲಕ ರಾಜ್ಯದಲ್ಲಿ ಎ,ಬಿ ದರ್ಜೆಯ ವೈದ್ಯಕೀಯ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆ ಆಧಾರದ ಮೇಲೆ ನೇರ ನೇಮಕಾತಿ ನಡೆಯಲಿದೆ. ಈ ಹಿಂದೆ ಇದ್ದ ಸಂದರ್ಶನ ಪದ್ಧತಿಯನ್ನು ಕೈ ಬಿಡಲು ಸರ್ಕಾರ ನಿರ್ಧಾರ ಕೈಗೊಂಡಿದೆ.
ಇದಲ್ಲದೆ ಅಂಗಡಿ ಮತ್ತು ವಾಣಿಜ್ಯ ಕೇಂದ್ರಗಳಲ್ಲಿ ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸಲು ಮಹಿಳೆಯರಿಗೆ ಅನುಮತಿ ನೀಡಲು ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾದ ಕರ್ನಾಟಕದಲ್ಲಿ 10 ವರ್ಷ ಶಿಕ್ಷಣ ಮಾಡಿದವರಿಗೆ ಶೇ 25ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿದೆ. ಇದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದೂ ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.
ಫೆ.17 ರಿಂದ ಅಧಿವೇಶನ
ಫೆಬ್ರುವರಿ 17ರಿಂದ 21ರವರೆಗೆ ವಿಧಾನಮಂಡಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದು, ಮಾರ್ಚ್ 2ರಿಂದ ಬಜೆಟ್ ಅಧಿವೇಶನ ನಡೆಯಲಿದೆ. ಮಾರ್ಚ್ 5ರಂದು ಬಜೆಟ್ ಮಂಡಿಸಲಾಗುವುದು ಎಂದರು.



