Connect with us

Dvg Suddi-Kannada News

ಕೆಪಿಎಸ್ ಸಿ ಕೆಲವು ಹುದ್ದೆಗಳ ಸಂದರ್ಶನ ರದ್ದುಗೊಳಿಸಿದ ರಾಜ್ಯ ಸರ್ಕಾರ

ರಾಜ್ಯ ಸುದ್ದಿ

ಕೆಪಿಎಸ್ ಸಿ ಕೆಲವು ಹುದ್ದೆಗಳ ಸಂದರ್ಶನ ರದ್ದುಗೊಳಿಸಿದ ರಾಜ್ಯ ಸರ್ಕಾರ

ಡಿವಿಜಿ ಸುದ್ದಿ, ಬೆಂಗಳೂರು: ಕೆಪಿಎಸ್‌ಸಿ ಎ, ಬಿ ದರ್ಜೆಯ ವೈದ್ಯ ಮತ್ತು ಎಂಜಿನಿಯರ್‌ನಂತಹ ಹುದ್ದೆಗಳಿಗೆ ಸಂದರ್ಶನ ನಡೆಸದೇ ಲಿಖಿತ ಪರೀಕ್ಷೆ ಮೂಲಕವೇ ಆಯ್ಕೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಈ ಮೂಲಕ ರಾಜ್ಯದಲ್ಲಿ ಎ,ಬಿ ದರ್ಜೆಯ ವೈದ್ಯಕೀಯ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆ ಆಧಾರದ ಮೇಲೆ ನೇರ ನೇಮಕಾತಿ ನಡೆಯಲಿದೆ. ಈ ಹಿಂದೆ ಇದ್ದ ಸಂದರ್ಶನ ಪದ್ಧತಿಯನ್ನು ಕೈ ಬಿಡಲು ಸರ್ಕಾರ ನಿರ್ಧಾರ ಕೈಗೊಂಡಿದೆ.

ಇದಲ್ಲದೆ ಅಂಗಡಿ ಮತ್ತು ವಾಣಿಜ್ಯ ಕೇಂದ್ರಗಳಲ್ಲಿ ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸಲು ಮಹಿಳೆಯರಿಗೆ  ಅನುಮತಿ ನೀಡಲು  ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾದ  ಕರ್ನಾಟಕದಲ್ಲಿ 10 ವರ್ಷ ಶಿಕ್ಷಣ ಮಾಡಿದವರಿಗೆ ಶೇ 25ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿದೆ. ಇದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದೂ ಕಾನೂನು ಸಚಿವ ಮಾಧುಸ್ವಾಮಿ  ತಿಳಿಸಿದರು.

ಫೆ.17 ರಿಂದ ಅಧಿವೇಶನ

ಫೆಬ್ರುವರಿ 17ರಿಂದ 21ರವರೆಗೆ ವಿಧಾನಮಂಡಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದು, ಮಾರ್ಚ್ 2ರಿಂದ ಬಜೆಟ್ ಅಧಿವೇಶನ ನಡೆಯಲಿದೆ. ಮಾರ್ಚ್ 5ರಂದು ಬಜೆಟ್ ಮಂಡಿಸಲಾಗುವುದು ಎಂದರು.

 

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top