ಡಿವಿಜಿ ಸುದ್ದಿ.ಕಾಂ, ದಾವಣಗೆರೆ: ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಸತತ ಸೋಲು ಕಂಡಿದೆ. ದೇಶದಲ್ಲಿ ಕಾಂಗ್ರೆಸ್ ಮತ್ತು ರಾಜ್ಯದಲ್ಲಿ ಸಿದ್ದರಾಮ್ಯ ತನ್ನ ಅಸ್ಥಿತ್ವ ಉಳಿಸಿಕೊಳ್ಳಬೇಕಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಜನಾಂದೋಲನ ಮಾಡಲು ಮುಂದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವ್ಯಂಗ್ಯವಾಡಿದರು.
ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮೊದಲ ಸಲ ದಾವಣಗೆರೆ ಬಂದ ಈಶ್ವರಪ್ಪ, ಶಾಸಕ ಎಸ್. ಎ. ರವೀಂದ್ರನಾಥ್ ಮನೆಯಲ್ಲಿ ಉಪಹಾರ ಸೇವಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ಮತ್ತು ಸಿದ್ಧರಾಮಯ್ಯ ತಮ್ಮ ಅಸ್ತಿತ್ವ ಗುರುತಿಸಿಕೊಳ್ಳುವುದಕ್ಕೆ ಜನಾಂದೋಲನ ನಡೆಸುತ್ತಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ನೆರೆ ಸಂತ್ರಸ್ಥರಿಗೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಸಮರೋಪಾದಿಯಲ್ಲಿ ಕ್ರಮ ಕೈಗೊಂಡಿದೆ.
ಕೇಂದ್ರದ ತಂಡಗಳು ಸರ್ವೇ ಮುಗಿಸಿದ್ದು ಕೇಂದ್ರದಿಂದ ಶೀಘ್ರ ಪರಿಹಾರ ಘೋಷಣೆಯಾಗಲಿದೆ.ಕರ್ನಾಟಕ ಹೊರತುಪಡಿಸಿ ಬೇರೆ ರಾಜ್ಯಗಳಲ್ಲು ಜಲಪ್ರವಾಹ ಹಾನಿ ಸೃಷ್ಟಿಸಿದೆ ಎಲ್ಲಾ ರಾಜ್ಯಗಳಿಗೆ ಪರಿಹಾರ ಘೋಷಣೆ ಸಂದರ್ಭದಲ್ಲಿ ರಾಜ್ಯಕ್ಕೂ ಘೋಷಣೆಯಾಗುತ್ತದೆ.
ಉತ್ತರ ಕರ್ನಾಟಕದ ಜನರ ಅನುಕೂಲಕ್ಕೆ ಬೆಳಗಾವಿಯಲ್ಲಿ ಆಡಳಿತಾತ್ಮಕ ಕೇಂದ್ರ ತೆರೆಯಲು ತೀರ್ಮಾನಿಸಿದ್ದೇವೆ ಎಂದರು.



