ದಾವಣಗೆರೆ: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್‍ಸೈಟ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜುಲೈ 2 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 080-22374848, 7899899039, ಹಾಗೂ ಜಿಲ್ಲಾ ನಿಗಮದ ದೂ.ಸಂ:08192-230934 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.