ದಾವಣಗೆರೆ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ನ.13 ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರ ವರೆಗೆ ಹರಿಹರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಕರಿಂದ ಅಹವಾಲು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಒದಗಿಸಬೇಕಾದ ಸರ್ಕಾರಿ ಸವಲತ್ತುಗಳು ಹಾಗೂ ಸರ್ಕಾರಿ ಕಾರ್ಯಗಳನ್ನು ಮಾಡಿಕೊಡಲು ಸರ್ಕಾರಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿರುವ, ನಿಗಧಿತ ಶುಲ್ಕಕ್ಕಿಂತ ಹೆಚ್ಚಿನ
ಹಣ (ಲಂಚ) ಕೇಳುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದು.
ಅಹವಾಲು ಸ್ವೀಕಾರ ಸಭೆಯಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪುರೆ, ಲೋಕಾಯುಕ್ತ ಪೊಲೀಸ್ ಠಾಣೆಯ ಡಿವೈಎಸ್‌ಪಿ ಕೆ.ಕಲಾವತಿ, ಪೊಲೀಸ್ ಇನ್ಸೆಪೆಕ್ಟರ್ ಸಿ.ಮಧುಸೂದನ, ಪ್ರಭು ಬ.ಸೂರಿನ, ಪಿ.
ಸರಳ ಇತರರು ಭಾಗವಹಿಸುವರು.