ದಾವಣಗೆರೆ: ರಾಜ್ಯಾದ್ಯಂತ ಎಲ್ಲಾ ರೀತಿಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ಚಮಚಗಳು, ಕ್ಲಿಂಗ್ ಫಿಲ್ಮ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆಗಳು ಮತ್ತು ಥರ್ಮೋಕೋಲ್ ಮತ್ತು ಪ್ಲಾಸ್ಟಿಕ್ ಮೇಕ್ರೋ ಬೀಡ್ಸ್‍ನಿಂದ ತಯಾರಾದಂತಹ ವಸ್ತುಗಳ ತಯಾರಿಕೆ ಸರಬರಾಜು ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ಮಲೇಬೆನ್ನೂರು ಪುರಸಭೆ ವ್ಯಾಪ್ತಿಯಲ್ಲಿ ತಕ್ಷಣದಿಂದ ಜಾರಿಗೆ ತರಲಾಗಿದೆ.
ಮಲೇಬೆನ್ನೂರು ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಯಾವುದೇ ವ್ಯಕ್ತಿ, ಅಂಗಡಿ ಮಾಲೀಕರು, ಮಾರಾಟಗಾರರು, ಸಗಟು ಮಾರಾಟಗಾರರು ಅಥವಾ ಚಿಲ್ಲರೆ ವ್ಯಾಪಾರಿಗಳು ಮತ್ತು ಮಾರಾಟಗಾರರು ಯಾವುದೇ ದಪ್ಪದ ರೀತಿಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‍ಗಳನ್ನು ಬಳಕೆಯನ್ನು ಮಾಡುವಂತಿಲ್ಲ. ಈ ಸಕಾರಿ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ರೂ.25,000/- ದಂಡ ವಿಧಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



