Connect with us

Dvgsuddi Kannada | online news portal | Kannada news online

ಕಾಂಗ್ರೆಸ್‌ ಅಹಂಕಾರದ ಪ್ರವೃತ್ತಿ ಮುಂದುವರಿಸಿದರೆ, ರಾಜ್ಯದಲ್ಲಿಯೂ ನೆಲೆ ಕಳೆದುಕೊಳ್ಳಲಿದೆ: ಎಚ್‌ಡಿಕೆ

ರಾಜಕೀಯ

ಕಾಂಗ್ರೆಸ್‌ ಅಹಂಕಾರದ ಪ್ರವೃತ್ತಿ ಮುಂದುವರಿಸಿದರೆ, ರಾಜ್ಯದಲ್ಲಿಯೂ ನೆಲೆ ಕಳೆದುಕೊಳ್ಳಲಿದೆ: ಎಚ್‌ಡಿಕೆ

ಡಿವಿಜಿ ಸುದ್ದಿ, ಬೆಂಗಳೂರು: ಮಿತ್ರ ಪಕ್ಷಗಳನ್ನೇ ಆಪೋಷನ ಪಡೆದು ಜೀವಿಸುತ್ತಿರುವ, ಜನರಿಂದ ತಿರಸ್ಕಾರವಾಗಿರುವ, ಇತರ ಪಕ್ಷಗಳೊಂದಿಗೆ ಚೌಕಾಸಿಯಲ್ಲಿ ತೊಡಗಿರುವ ಕಾಂಗ್ರೆಸ್‌ ಭಾರತದಲ್ಲಿ ರಾಜಕೀಯ ಪಕ್ಷವಾಗಿ ಉಳಿದಿದೆಯೇ? ಕಾಂಗ್ರೆಸ್‌ ತನ್ನ ಅಹಂಕಾರದ ಪ್ರವೃತ್ತಿ ಮುಂದುವರಿಸಿಕೊಂಡು ಹೋದರೆ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳುವುದರಲ್ಲಿ ಅನುಮಾನಗಳಿಲ್ಲ ಎಂದು ಮಾಜಿ ಸಿಎಂ ಎಚ್ .ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವಿಟ್ ಮೂಲಕ ಕಾಂಗ್ರೆಸ್ ವಿರುದ್ಧ ಆಕ್ರೋಶ  ಹೊರ ಹಾಕಿದ್ದಾರೆ.  ಉಪಚುನಾವಣೆಗೆ ಅಭ್ಯರ್ಥಿಗಳು ಗತಿ ಇಲ್ಲದೆ ಜೆಡಿಎಸ್‌ನವರನ್ನು ಸೆಳೆಯುವ ಕಾಂಗ್ರೆಸ್‌ ರಾಜಕೀಯ ಪಕ್ಷವೇ? ದೇಶದಲ್ಲಿ ಇತರ ಪಕ್ಷಗಳೊಂದಿಗೆ ಚೌಕಾಸಿಯಲ್ಲಿ ತೊಡಗಿರುವ ಕಾಂಗ್ರೆಸ್‌, ಭಾರತದಲ್ಲಿ ರಾಜಕೀಯ ಪಕ್ಷವಾಗಿ ಉಳಿದಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಜೆಡಿಎಸ್‌ ಇನ್ನೊಬ್ಬರ ಹೆಗಲ ಮೇಲೆ ಕುಳಿತುಕೊಂಡು ಅಧಿಕಾರಕ್ಕೆ ಬರುವವರು. ಅವರು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವವರಲ್ಲ. ನನ್ನ ಪ್ರಕಾರ ಜೆಡಿಎಸ್ ಒಂದು ರಾಜಕೀಯ ಪಕ್ಷವಲ್ಲ ಎಂದು ವಿಪಕ್ಷ  ಸಿದ್ದರಾಮಯ್ಯ ಹೇಳಿದ್ದರು.

ಜೆಡಿಎಸ್‌ನಿಂದ ಪ್ರವರ್ದಮಾನಕ್ಕೆ ಬಂದಿದ್ದ, ಜೆಡಿಎಸ್‌ನಿಂದಲೇ ಡಿಸಿಎಂ ಆದ ನಾಯಕರೊಬ್ಬರು, ಸಭೆಯೊಂದರಲ್ಲಿ ಜೆಡೆಎಸ್‌ ಮುಖಂಡರನ್ನು ತಮ್ಮ ಈಗಿನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾ ಅದೇ ಜೆಡಿಎಸ್‌ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಜೆಡಿಎಸ್‌ ರಾಜಕೀಯ ಪಕ್ಷವಲ್ಲ ಎಂದು ಹೇಳಿದ್ದಾರೆ. ಉಪಚುನಾವಣೆಗೆ ಅಭ್ಯರ್ಥಿಯ ಗತಿ ಇಲ್ಲದೆ ಜೆಡಿಎಸ್‌ನವರನ್ನು ಸೆಳೆದ ನಿಮ್ಮದು ರಾಜಕೀಯ ಪಕ್ಷವೇ?’ ಎಂದು ಕೇಳಿದ್ದಾರೆ.

ಭಾರತದ ಅತಿ ಹಳೆಯ ರಾಜಕೀಯ ಪಕ್ಷವಾಗಿರುವ ಕಾಂಗ್ರೆಸ್‌ ಇಂದು ಯಾವ ಪರಿಸ್ಥಿತಿಯಲ್ಲಿದೆ, ಯಾವ ರಾಜ್ಯಗಳಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಿದೆ? ಎಲ್ಲೆಲ್ಲಿ ಯಾರು ಯಾರ ಹೆಗಲ ಮೇಲೆ ಕುಳಿತು ರಾಜಕೀಯ ಮಾಡುತ್ತಿದೆ? ಎಲ್ಲಿಲ್ಲಿ ಯಾರು ಯಾರಿಗೆ ಹೆಗಲಾಗಿದೆ? ಜೆಡಿಎಸ್‌ ಉಪ್ಪು ತಿಂದ ಆ ಮಹಾನ್‌ ನಾಯಕರು ಈ ಪ್ರಶ್ನೆಗಳಿಗೆ ಉತ್ತರ ನೀಡುವರೇ? ಎಂದು ಪ್ರಶ್ನೆ ಮಾಡಿದ್ದಾರೆ.

2018ರ ಚುನಾವಣೆಯಲ್ಲಿ ಮಹಾನ್‌ ನಾಯಕರ ಅಪ್ಪನಾಣೆ , ತಿಪ್ಪರಲಾಗದ ಸವಾಲುಗಳನ್ನು ಜನ ಸೋಲಿಸಿದ್ದಾರೆ. ಆ ಪಕ್ಷ ಅಧಿಕಾರಕ್ಕೆ ಬಾರದು, ಈ ಪಕ್ಷ ಅಧಿಕಾರಕ್ಕೆ ಬಾರದು ಎಂದು ಅಪ್ಪನಾಣೆಗಳನ್ನು ಇಟ್ಟವರಿಗೆ ಜನ, ಆಣೆ ಪ್ರಮಾಣದ ಮಹತ್ವ ತಿಳಿಸಿಕೊಟ್ಟಿದ್ದಾರೆ. ಈ ಉಪ ಚುನಾವವಣೆಯಲ್ಲೂ ಅವರಿಗೆ ತಕ್ಕ ಉತ್ತರ ಸಿಗಲಿದೆ ಎಂದಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

Advertisement

ದಾವಣಗೆರೆ

Advertisement
To Top