ಮೈಸೂರು : ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ನಡೆಯುತ್ತಿರುವ ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದೆ. ಇದರ ಮಧ್ಯೆ ಮೈಸೂರಿನಲ್ಲಿ ಕರ್ತವ್ಯನಿರತ ಚುನಾವಣಾಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಪಿರಿಯಾಪಟ್ಟಣದ ಪುಷ್ಪಾ ಕಾನ್ವೆಂಟ್ನ ಮತ ಎಣಿಕೆ ಕೇಂದ್ರದಲ್ಲಿ ಎನ್ ಶೆಟ್ಟಹಳ್ಳಿ ಗ್ರಾ.ಪಂ. ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೋರೇಗೌಡ (52) ಸಾವನ್ನಪ್ಪಿದ್ದಾರೆ. ಕರ್ತವ್ಯದಲ್ಲಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.