ದಾವಣಗೆರೆ: ಸಿಎಂ ಬಸವರಾಜ ಬೊಮ್ಮಾಯಿ ಎಲ್ಲಿಂದ ಸ್ಪರ್ಧಿಸಬೇಕೆಂದು ವರಿಷ್ಠರು ನಿರ್ಧಾರ ಮಾಡುತ್ತಾರೆ. ಬೊಮ್ಮಾಯಿ ಹೊನ್ನಾಳಿಗೆ ಬಂದ್ರೆ ನನ್ನ ಕ್ಷೇತ್ರ ಬಿಟ್ಟುಕೊಡ್ತೇನೆ ಸಿದ್ಧ ಎಂದು ಶಾಸಕ M.P.ರೇಣುಕಾಚಾರ್ಯ ಹೇಳಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿ ಸಿಎಂ ಬೊಮ್ಮಾಯಿ ದಾವಣಗೆರೆ ಉತ್ತರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಯೇ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಸಿಎಂ ಬೊಮ್ಮಾಯಿ ಅವರು ಎಲ್ಲಿಂದ ಸ್ಪರ್ಧೆ ಮಾಡಬೇಕು ಎನ್ನೋದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು. ಅವರು ಹೊನ್ನಾಳಿಗೆ ಬಂದ್ರೆ ನನ್ನ ಕ್ಷೇತ್ರ ಬಿಟ್ಟುಕೊಡಲು ಸಿದ್ಧ ಎಂದಿದರು.
ಸಚಿವ ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ. ಭವಿಷ್ಯದ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಯಾರಿಗೆ ಸಂಪುಟದಲ್ಲಿ ಸೇರಿಸಿಕೊಳ್ಳುವುದು, ಬಿಡುವುದು ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧರಿಸುತ್ತಾರೆ. ನಾನು ಹೇಳುವ ರೀತಿ ಸಂಪುಟ ಪುನಾರಚನೆ ಆಗಲ್ಲ. ವರ್ಷಕ್ಕೊಮ್ಮೆ ಸಚಿವರು ಬದಲಾದ್ರೆ ಕೆಲಸ ಮಾಡೋದು ಕಷ್ಟವಾಗುತ್ತದೆ.ಆದಷ್ಟು ಬೇಗ ಸಚಿವ ಸಂಪುಟ ಪುನಾರಚನೆ ಆದ್ರೆ ಒಳ್ಳೆದು ಎಂದರು.
ಹಿಜಾಬ್ ತೀರ್ಪು ನೀಡಿದ ಹೈಕೋರ್ಟ್ ನ್ಯಾಯಾಧೀಶರಿಗೆ ಪ್ರಾಣ ಬೆದರಿಕೆ ಒಡ್ಡುತ್ತಾರೆ ಅಂದ್ರೆ ಸಾಮಾನ್ಯರ ಗತಿಯೇನು. ಇದು ಪಾಕಿಸ್ತಾನ್ ಅಂದ್ಕೊಂಡಿದ್ದಾರೆ. ಇದು ಭಾರತ ದೇಶ ಇಲ್ಲಿ ಎಲ್ಲರೂ ಕಾನೂನನ್ನು ಗೌರವಿಸಬೇಕು. ಕೇಂದ್ರ, ರಾಜ್ಯದಲ್ಲಿ ನಮ್ಮ ಸರ್ಕಾರವಿದೆ. ಬೆದರಿಕೆ ಹಾಕಿದವರನ್ನು ಮಟ್ಟ ಹಾಕುತ್ತೇವೆ. ಯುಪಿ ಮಾದರಿಯಲ್ಲಿ ರಾಜ್ಯದಲ್ಲಿ ಸಿಎಂ ಕಠಿಣ ಕಾನೂನು ಜಾರಿಗೊಳಿಸುತ್ತಾರೆ. ಈಗಾಗಲೇ ಮಾಜಿ ಸಿಎಂ ಬಿಎಸ್‌ವೈ ವಿವಿಧ ಕಾನೂನು ಜಾರಿಗೆ ತಂದಿದ್ರು. ಕೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದುದ್ರೆ ಕಾಶ್ಮೀರ ಎಲ್ಲವನ್ನೂ ಬಿಟ್ಟು ಕೊಡುತ್ತಿದ್ದರು. ಪ್ರಧಾನಿ ಮೋದಿ ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು.