Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಮೇಯರ್, ಉಪಮೇಯರ್ ಸ್ಥಾನಗಳಿಗೆ ಚುನಾವಣೆ

ದಾವಣಗೆರೆ

ದಾವಣಗೆರೆ: ನಾಳೆ ಮೇಯರ್, ಉಪಮೇಯರ್ ಸ್ಥಾನಗಳಿಗೆ ಚುನಾವಣೆ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಮತ್ತು ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ನಾಳೆ (ಫೆ.25) ಚುನಾವಣೆ ನಡೆಯಲಿದೆ.

ನಾಳೆ ಬೆಳಗ್ಗೆ 11 ಗಂಟೆಗೆ ದಾವಣಗೆರೆ ಮಹಾನಗರ ಪಾಲಿಕೆಯ ಚುನಾವಣಾ ಸಭೆಯನ್ನು ದಾವಣಗೆರೆ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು ಎಂದು ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಒಟ್ಟು 45 ಸದಸ್ಯರನ್ನು ಹೊಂದಿರುವ ದಾವಣಗೆರೆ ಮಹಾನಗರ ಪಾಲಿಕೆಗೆ 12 ಎಂಎಲ್ಸಿಗಳು, 21 ಕಾಂಗ್ರೆಸ್ ಸದಸ್ಯರು, 17 ಬಿಜೆಪಿ ಸದಸ್ಯರು, ಜೆಡಿಎಸ್‌ನ ಒಬ್ಬರು, ನಾಲ್ವರು ಪಕ್ಷೇತರರು, ಓರ್ವ ಸಂಸದ ಹಾಗೂ ಇಬ್ಬರು ಶಾಸಕರು ಮತ ಚಲಾಯಿಸಲಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top