ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜು. 15 ರಿಂದ 19 ರವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ ರೈತರಿಗೆ ಪಶುಸಂಗೋಪನಾ ಚಟುವಟಿಕೆಗಳ ಬಗ್ಗೆ ನಡೆಯುವ ತರಬೇತಿಯನ್ನು ಏರ್ಪಡಿಸಲಾಗಿದೆ.
ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು.
ಹೆಚ್ಚಿನ ವಿವರಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಇವರ ದೂ.ಸಂ: 08192-233787 ಗೆ ಸಂಪರ್ಕಿಸಬೇಕೆಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.