ದಾವಣಗೆರೆ: ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಆದರೆ, ರಾಜಕಾರಣಿಗಳೇ ಕರ್ಫ್ಯೂ ನಿಯಮ ಪಾಲಿಸುತ್ತಿಲ್ಲ. ಜಗಳೂರು ಬಿಜೆಪಿ ಶಾಸಕ ಎಸ್.ವಿ. ರಾಮಚಂದ್ರಪ್ಪ ಇಂದು ನೂರಾರು ಜನರ ನಡುವೆ ಅದ್ಧೂರಿಯಾಗಿ ಜನ್ಮ ದಿನ ಆಚರಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಆರೋಗ್ಯ ಅಧಿಕಾರಿಗಳು ಭಾಗಿಯಾಗಿದ್ದಾರೆ.
ದಾವಣಗೆರೆ ನಗರದ ಕೆ.ಬಿ. ಬಡಾವಣೆಯ ಮನೆ ಪಕ್ಕದಲ್ಲಿ ಬೃಹತ್ ಶಾಮಿಯಾನ ಹಾಕಿಸಿ ಜನ್ಮದಿನ ಆಚರಿಸಿಕೊಂಡರು. ಬಿಜೆಪಿ ಪಕ್ಷದ ಮುಖಂಡರು, ಜನಪ್ರತಿನಿಧಿಗಳು, ಜಿಲ್ಲಾ, ತಾಲೂಕು ಪಂಚಾಯತ್ ಮಾಜಿ ಸದಸ್ಯರು ಭಾಗಿಯಾಗಿದ್ದರು. ಇನ್ನು ಕೊರೊನಾ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಮೂಡಿಸಬೆಕಾದ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳೇ ಸಭೆಯಲ್ಲಿ ಭಾಗಿಯಾಗಿದ್ದು ಇನ್ನೊಂದು ವಿಶೇಷ. ಜನ್ಮ ದಿನದ ಸಮಾರಂಭಕ್ಕೆ ಸ್ವತಃ ಪೊಲೀಸ್ ಇಲಾಖೆಯಿಂದ ಭದ್ರತೆ ಒದಗಿಸಲಾಗಿತ್ತು. ಸಮಾರಂಭಕ್ಕೆ ಬಂದವರಿಗೆ ವಿವಿಧ ಬಗೆಯ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿತ್ತು.



