Connect with us

Dvgsuddi Kannada | online news portal | Kannada news online

ಎಂಎಲ್ ಸಿ ಎಚ್. ವಿಶ್ವನಾಥ್ ಸಚಿವ ಸ್ಥಾನದ ಕನಸು ಭಗ್ನ; ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ರಾಜಕೀಯ

ಎಂಎಲ್ ಸಿ ಎಚ್. ವಿಶ್ವನಾಥ್ ಸಚಿವ ಸ್ಥಾನದ ಕನಸು ಭಗ್ನ; ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಎಂಎಲ್ ಸಿ ಹೆಚ್.ವಿಶ್ವನಾಥ್ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಸಚಿವರಾಗುವ ಕನಸು ಕಂಡಿದ್ದ ಹೆಚ್.ವಿಶ್ವನಾಥ್ ಗೆ ಮತ್ತೆ ಹಿನ್ನಡೆಯಾದಂತಾಗಿದೆ.  ನಾಮನಿರ್ದೇಶನ ಆಧಾರದಲ್ಲಿ ಸಚಿವ ಸ್ಥಾನ ಅಸಾಧ್ಯ ಎಂದು ಈ ಹಿಂದೆ ಹೈಕೋರ್ಟ್ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ವಿಶ್ವನಾಥ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇದೀಗ ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಿದ್ದ ಆಧಾರದ ಮೇಲೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಎತ್ತಿ ಹಿಡಿದಿದೆ. ಸಾಹಿತ್ಯ ಕೋಟಾದಡಿಯಲ್ಲಿ ರಾಜ್ಯ ಸರ್ಕಾರ ವಿಶ್ವನಾಥ್ ಅವರನ್ನು ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಿತ್ತು. ನಾಮನಿರ್ದೇಶನದ ಬಳಿಕ ಸಚಿವರಾಗಲು ವಿಶ್ವನಾಥ್ ಪ್ರಯತ್ನಿಸಿದ್ದರು. ಆದರೆ ಇದೀಗ ಅವರ ಕನಸು ನುಚ್ಚು ನೂರಾಗಿದೆ. .

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top