Connect with us

Dvgsuddi Kannada | online news portal | Kannada news online

ರೈತರಿಗೆ ಸಿಹಿ ಸುದ್ದಿ; ತೋಟಗಾರಿಕೆಯನ್ನು ಉದ್ದಿಮೆಯನ್ನಾಗಿ ಪರಿಗಣಿಸಲು ಅಗತ್ಯ ಕ್ರಮ: ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ರೈತರಿಗೆ ಸಿಹಿ ಸುದ್ದಿ; ತೋಟಗಾರಿಕೆಯನ್ನು ಉದ್ದಿಮೆಯನ್ನಾಗಿ ಪರಿಗಣಿಸಲು ಅಗತ್ಯ ಕ್ರಮ: ಸಿಎಂ ಯಡಿಯೂರಪ್ಪ

ಬೆಂಗಳೂರು: ತೋಟಗಾರಿಕೆಯನ್ನು ಉದ್ದಿಮೆಯನ್ನಾಗಿ ಪರಿಗಣಿಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಾಗುವುದು. ರೈತರ ಆದಾಯ ದ್ವಿಗುಣಗೊಳಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯ ಹಮ್ಮಿಕೊಂಡಿರುವ ತೋಟಗಾರಿಕಾ ಮೇಳವನ್ನು ಆನ್ ಲೈನ್ ನಲ್ಲಿ ಮೂಲಕ  ಉದ್ಘಾಟಿಸಿ ಮಾತನಾಡಿದ ಅವರು, ಸಿ ಎಫ್ ಟಿಆರ್ ಐ ಹಾಗೂ ಭಾರತೀಯ ತೋಟಗಾರಿಕಾ ಸಂಸ್ಥೆಯ ಸಹಭಾಗಿತ್ವದೊಂದಿಗೆ ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕೇಜಿಂಗ್ ಗಳ ಬಗ್ಗೆ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ 100 ನೇ ಕಿಸಾನ್ ರೈಲಿಗೆ ಇತ್ತೀಚೆಗಷ್ಟೇ ಚಾಲನೆ ನೀಡಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ ಕಿಸಾನ್ ರೈಲುಗಳ ಮೂಲಕ 27 ಸಾವಿರ ಟನ್ ಕೃಷಿ ಉತ್ಪನ್ನಗಳನ್ನು ಸಾಗಿಸಲಾಗಿದೆ. ಬೇಗನೆ ಹಾಳಾಗಬಹುದಾದ ದಾಳಿಂಬೆ, ಕಿತ್ತಳೆ ಹಾಗೂ ಇತರ ತೋಟಗಾರಿಕಾ ಬೆಳೆಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಕಿಸಾನ್ ರೈಲ್ ಸೌಲಭ್ಯ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ತೋಟಗಾರಿಕಾ ಕ್ಷೇತ್ರದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ರಾಜ್ಯವು ತನ್ನ ಸ್ಥಾನವನ್ನು ಕಾಯ್ದುಕೊಂಡು ಇನ್ನೂ ಹೆಚ್ಚಿನ ಸಾಧನೆ ಮಾಡಲು ಪೂರಕ ಸಂಶೋಧನೆ, ವಿಸ್ತರಣೆ ಹಾಗೂ ಇತರ ಮೂಲಕಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ತೋಟಗಾರಿಕಾ ಸಚಿವ ನಾರಾಯಣಗೌಡ ಮಾತನಾಡಿ, ರಾಜ್ಯದಲ್ಲಿ ತೋಟಗಾರಿಕೆ ಉತ್ತೇಜನಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ತೋಟಗಾರಿಕೆ ಉತ್ಪನ್ನಗಳ ರಫ್ತು ಪ್ರಮಾಣ ಶೇ. 2.5 ರಿಂದ ಶೇ. 5 ಕ್ಕೇರಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ಹೆಚ್ಚಿಸಲು ರೈತರಿಗೆ ಅಗತ್ಯ ಬೆಂಬಲ ನೀಡಲಾಗುವುದು ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});