ಬೆಂಗಳೂರು: ಟೆಂಡರ್ ಮೂಲಕ ಕಾಮಗಾರಿ ಗುತ್ತಿಗೆ ಪಡೆದು ಉಪ ಗುತ್ತಿಗೆ ನೀಡುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಎಂ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಾಮಗಾರಿಗಳ ಉಪ ಗುತ್ತಿಗೆ ನೀಡುವುದನ್ನು ತಡೆಯಲು ಅಗತ್ಯವಿದ್ದರೆ ಕಾನೂನು ತರಲಾಗುವುದು ಎಂದು ಹೇಳಿದರು.
ಉಪಗುತ್ತಿಗೆಗೆ ಕಾನೂನಿನಲ್ಲಿ ಅವಕಾಶವಿಲ್ಲ. ಒಂದು ವೇಳೆ ಉಪ ಗುತ್ತಿಗೆ ನೀಡಿರುವುದು ಗಮನಕ್ಕೆ ಬಂದರೆ ಲೋಕೋಪಯೋಗಿ ಇಲಾಖೆ ಮುಖ್ಯಸ್ಥರಿಂದ ತನಿಖೆ ಮಾಡಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕೋವಿಡ್‍ನಿಂದಾಗಿ ಕಾಮಗಾರಿಗಳು ವಿಳಂಬವಾಗಿವೆ. ನಿರ್ದಿಷ್ಟ ಕಾಲಾವಧಿಯಲ್ಲಿ ಕಮಗಾರಿ ಮುಗಿಸದಿದ್ದರೆ ಗುತ್ತಿಗೆದಾರರಿಗೆ ದಂಡ ವಿಧಿಸುವುದು ಹಾಗೂ ಟೆಂಡರ್ ವಜಾ ಮಾಡುವಂತಹ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.



