ಆರ್‌ಸಿಬಿ ಐಪಿಎಲ್ ಕಪ್ ಗೆಲ್ಲುವುದು ಕಷ್ಟ; ಕೊಹ್ಲಿ ಎಡಗೈಯಲ್ಲಿ ಬ್ಯಾಟ್ ಮಾಡಿದ್ರೆ ಗೆಲ್ಲಬಹುದು: ಮೈಕಲ್ ವಾನ್ ವ್ಯಂಗ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಅಬುಧಾಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಐಪಿಎಲ್ ಗೆಲ್ಲುತ್ತದೆ ಎಂದು ಭಾವಿಸಿಕೊಳ್ಳಬೇಡಿ  ಎಂದು ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಮೈಕಲ್ ವಾನ್ ಹೇಳಿದ್ದಾರೆ.

ಸತತ ನಾಲ್ಕು ಸೋಲಿನ ನಂತರವೂ ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡ ಪ್ಲೇ ಆಫ್‍ಗೆ ಆಯ್ಕೆಯಾಗಿದೆ. ಈ ಮೂಲಕ ಈ ಬಾರಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿದೆ. ಆದರೆ ಮೈಕಲ್ ವಾನ್ ಮಾತ್ರ ಈ ಬಾರಿ ಆರ್‌ಸಿಬಿ ಕಪ್ ಗೆಲ್ಲುವುದಿಲ್ಲ ಎಂದಿದ್ದಾರೆ.

rcb 12

ನಾನು ಆರಂಭದಿಂದಲೂ ಹೇಳುತ್ತಿದ್ದೇನೆ ಬೆಂಗಳೂರು ತಂಡ ಈ ಬಾರಿ ಕಪ್ ಗೆಲ್ಲುವುದು ಅನುಮಾನ. ಏಕೆಂದರೆ ಟೂರ್ನಿಯುದ್ದಕ್ಕೂ ಆರ್‌ಸಿಬಿ ಕಪ್ ಗೆಲ್ಲುವ ರೀತಿಯ ಪ್ರದರ್ಶನ ತೋರಿಲ್ಲ ಎಂದು ವಾನ್ ಹೇಳಿದ್ದಾರೆ. ಇದರ ಜೊತೆಗೆ ಇದು 2020 ಈ ವರ್ಷ ಏನೂ ಬೇಕಾದರೂ ಆಹಬಹುದು. ವಿರಾಟ್ ಕೊಹ್ಲಿಯವರು ಎಡಗೈನಲ್ಲಿ ಬ್ಯಾಟ್ ಮಾಡಿ ತಂಡವನ್ನು ಗೆಲ್ಲಿಸಬಹುದು ಆದರೆ ಅದು ಕಷ್ಟ ಎಂದು ವ್ಯಂಗ್ಯವಾಡಿದ್ದಾರೆ.

ಬೆಂಗಳೂರು ತಂಡದಲ್ಲಿ ಮೂರು ನಾಕೌಟ್ ಪಂದ್ಯಗಳಲ್ಲಿ ಒತ್ತಡದ ನಡುವೆಯೂ ಉತ್ತಮವಾಗಿ ಆಡುವ ಆಟಗಾರರು ಇದ್ದಾರೆ. ಆರ್‌ಸಿಬಿ ಬ್ಯಾಟಿಂಗ್ ಲೈನಪ್ ಬಲಿಷ್ಠವಾಗಿದೆ. ಇದರ ಜೊತೆಗೆ ಒತ್ತಡದ ಜೊತೆಗೆ ಆಟವಾಡುವ ಅನುಭವಿ ಆಟಗಾರರು ಇದ್ದಾರೆ. ಬೆಂಗಳೂರು ಪರವಾಗಿ ಮಾತನಾಡಬೇಕು ಎಂದರೆ, ಅವರು ತಾಳ್ಮೆಯ ಜೊತೆಗೆ ಅಕ್ರಮಣಕಾರಿ ಆಟವನ್ನು ಆಡಬೇಕು ಎಂದು ಹೇಳಬಹುದು ಎಂದು ವಾನ್ ತಿಳಿಸಿದ್ದಾರೆ.

virat

ಐಪಿಎಲ್ ಆರಂಭದಲ್ಲಿ ವಿರಾಟ್ ಕೊಹ್ಲಿ ಪಡೆ ಉತ್ತಮ ಪ್ರದರ್ಶನ ನೀಡಿತ್ತು. ಆದರೆ ಕೊನೆಯಲ್ಲಿ ಎಡವಿ ನಾಲ್ಕು ಪಂದ್ಯಗಳನ್ನು ಸತತವಾಗಿ ಕೈಚೆಲ್ಲಿತ್ತು. ಆದರೂ ಆಡಿದ 14 ಪಂದ್ಯದಲ್ಲಿ 7 ಪಂದ್ಯಗಳನ್ನು ಗೆದ್ದು ನೆಟ್ ರನ್ ರೇಟ್ ಆಧಾರದ ಮೇಲೆ ಪ್ಲೇ ಆಫ್‍ಗೆ ಆಯ್ಕೆಯಾಗಿದೆ. ಜೊತೆಗೆ ಆರಂಭಿಕ ದೇವದತ್ ಪಡಿಕ್ಕಲ್, ನಾಯಕ ವಿರಾಟ್ ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ಉತ್ತಮ ಲಯದಲ್ಲಿ ಕಾಣಿಸಿಕೊಂಡಿದ್ದು, ತಮ್ಮ ನೆಚ್ಚಿನ ತಂಡ ಕಪ್ ಗೆಲ್ಲುತ್ತದೆ ಎಂದು ಆರ್‌ಸಿಬಿ ಅಭಿಮಾನಿಗಳು ಉತ್ಸಾಹ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *