Connect with us

Dvgsuddi Kannada | online news portal | Kannada news online

ದಾವಣಗೆರೆ; ಕೌಶಲ್ಯ ತರಬೇತಿಗೆ ಹೆಸರು ನೋಂದಾಯಿಸಿಕೊಳ್ಳಲು ಸೂಚನೆ

govt

ದಾವಣಗೆರೆ

ದಾವಣಗೆರೆ; ಕೌಶಲ್ಯ ತರಬೇತಿಗೆ ಹೆಸರು ನೋಂದಾಯಿಸಿಕೊಳ್ಳಲು ಸೂಚನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಸ್ಕಿಲ್ ಹಬ್ ಇನಿಶಿಯೇಟ್ ಫಾರ್ ಓಓಎಸ್‍ಸಿ ಕಾರ್ಯಕ್ರಮವನ್ನು ಅನುಷ್ಠನಗೊಳಿಸಲು ಹಾಗೂ ಭಾರತ ಸರ್ಕಾರದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‍ಎಸ್‍ಡಿಸಿ) ಹಾಗೂ ಎನ್‍ಎಸ್‍ಕ್ಯೂಎಫ್ ಮತ್ತು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಹಾಗೂ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ದಾವಣಗೆರೆ ಇವರ ಸಹಯೋಗದೊಂದಿಗೆ ವಿದ್ಯಾಭ್ಯಾಸವನ್ನು ನಿಲ್ಲಿಸಿರುವ 15 ರಿಂದ 45ರ ವಯೋಮಿತಿಯೊಳಗಿರುವವರಿಗೆ ಕೌಶಲ್ಯ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಆಸಕ್ತರು ಹೆಸರು ನೊಂದಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಹೆಸರು ನೋಂದಣಿ ಮಾಡಿಕೊಳ್ಳುವ ಶಾಲಾ ಕಾಲೇಜು ಹಾಗೂ ವಲಯಗಳ ವಿವರ ಇಂತಿದೆ. ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜು ದಾವಣಗೆರೆ ಇಲ್ಲಿಗೆ ಐಟಿ ಹಾಗೂ ಬ್ಯೂಟಿ ಅಂಡ್ ವೆಲ್‍ನೆಸ್ ಸೆಕ್ಟರ್‍ಗಳು ಮಂಜೂರಾಗಿರುತ್ತದೆ. ಮೋತಿ ವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು, ದಾವಣಗೆರೆ ಇಲ್ಲಿಗೆ ಐಟಿ ಹಾಗೂ ಆಟೊಮೊಬೈಲ್ ಸೆಕ್ಟರ್‍ಗಳು ಮಂಜೂರಾಗಿರುತ್ತದೆ.

ಅಭ್ಯರ್ಥಿಗಳು ಮೊಬೈಲ್ ಫೋನ್ ಕರೆಯ ಮೂಲಕ ಅಥವಾ ಖುದ್ದಾಗಿ ಕಚೇರಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ದಾವಣಗೆರೆ-8971749636, ಡಿ.ಡಿ.ಪಿ.ಐ ಕಚೇರಿ-7892509376, ಮೋತಿವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು-9480115378, ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜು-7259661666 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top