Connect with us

Dvgsuddi Kannada | online news portal | Kannada news online

ಮತ್ತೆ ಹಳೇ ಪಿಂಚಣಿ ಯೋಜನೆ ಜಾರಿ ಇಲ್ಲ; ಸಿಎಂ ಬಸವರಾಜ ಬೊಮ್ಮಾಯಿ

ಪ್ರಮುಖ ಸುದ್ದಿ

ಮತ್ತೆ ಹಳೇ ಪಿಂಚಣಿ ಯೋಜನೆ ಜಾರಿ ಇಲ್ಲ; ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಹಳೇ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರುವ ಯೋಚನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಹಳೇ ಪಿಂಚಣಿ ಯೋಜನೆ ಜಾರಿಗಾಗಿ ಹೋರಾಡುತ್ತಿರುವ ಸರಕಾರಿ ನೌಕರರಿಗೆ ಹಿನ್ನಡೆಯಾಗಿದೆ. ಬಿಜೆಪಿಯ ರೇಣುಕಾ ಚಾರ್ಯ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಿಎಂ, ಹಳೇ ಪಿಂಚಣಿ ಯೋಜನೆಯ ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಕಷ್ಟು ನಿಧಿ ಇಲ್ಲ. ಮರು ಜಾರಿ ಕಷ್ಟ. ಆರ್‌ಬಿಐ ರಚಿಸಿದ ಸಮಿತಿಯ ವರದಿಯ ಶಿಫಾರಸಿನ ಆಧಾರದ ಮೇಲೆ ಕೇಂದ್ರ ಸರಕಾರ 2004ರ ಜ.1ರಂದು ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿ ಗೊಳಿಸಿದೆ. ಇತರ ರಾಜ್ಯಗಳೂ ಈ ಯೋಜನೆಯನ್ನು ಅಳವಡಿಸಿಕೊಂಡಿದ್ದು, 2006ರಲ್ಲಿ ಕರ್ನಾಟಕದಲ್ಲೂ ಜಾರಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top