ದಾವಣಗೆರೆ: ಕೇಂದ್ರ ಸರ್ಕಾರ ರೈತರ ವಿರೋಧಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಕರೆ ನೀಡಿರುವ ಭಾರತ ಬಂದ್ ಗೆ ದಾವಣಗೆರೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕ ಅಂಗಡಿಗಳು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿ ರೈತರ ಪ್ರತಿ ಭಟನೆಗೆ ಬೆಂಬಲ ಸೂಚಿಸಿದರು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿ ರೈತ ಸಂಘ ಮತ್ತು ಹಸಿರುಸೇನೆ ಸೇರಿದಂತೆ ವಿವಿಧ ಸಂಘಟನೆಗಳು ಪಿಬಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರೈತ ಮುಖಂಡ ತೇಜಸ್ವಿ ಪಟೇಲ್ ಜನರಿಗೆ ಊಟದ ಪ್ಯಾಕೆಟ್ ಹಂಚುವ ಮೂಲಕ ‘ಅನ್ನ ತಿನ್ನುವವರು ಎಲ್ಲರೂ ಈ ಬಂದ್‌ಗೆ ಬೆಂಬಲ ನೀಡಬೇಕು’ ಎಂದು ನಗರದಲ್ಲಿ ಸಂಚರಿಸಿ ಪ್ರತಿಭಟನೆ ನಡೆಸಿದರು.
ರೈತ ಮುಖಂಡ ಬಣದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ಮಾಡಲಾಯಿತು. ಕೆಲ ಕನ್ನಡ ಪರ ಸಂಘಟನೆ ಸಂಘಟನೆಗಳು ಜಯದೇವ ಸರ್ಕಲ್‌ನಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಇನ್ನು ಜಿಲ್ಲಾ ಕ್ರಾಂಗ್ರೆಸ್ ಸಮಿತಿಯಿಂದಲೂ ಪ್ರತಿಭಟನೆ ನಡೆಯಿತು.



