ಬಳ್ಳಾರಿ : ಪ್ರಧಾನಿ ನರೇಂದ್ರ ಮೋದಿ ಆಧುನಿಕ ಭಸ್ಮಾಸುರ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಟೀಕಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ದ ಕಿಡಿಕಾರಿದರು. ದೇಶದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸುವುದಾಗಿ ಹೇಳಿದ್ದ ಪ್ರಧಾನಿ ಮೋದಿ, ಹೇಳೋದು ಒಂದು, ಮಾಡೋ ಕೆಲಸ ಒಂದು. ಈಗಿರುವ ಉದ್ಯೋಗಗಳು ಕೂಡ ಹೋಗುತ್ತಿದೆ ಬೇಸರ ವ್ಯಕ್ತಪಡಿಸಿದರು. ಇನ್ನು ನಿವ್ವಳ ದೇಶೀಯ ಉತ್ಪನ್ನ(ಜಿಡಿಪಿ) ಕುಸಿದಿದೆ. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿದರು.



