Connect with us

Dvgsuddi Kannada | online news portal | Kannada news online

ಕೊರೊನಾ ಅಲೆ ತಗ್ಗಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿ: ರಾಜಪಾಲ ವಿ.ಆರ್. ವಾಲಾ

ರಾಜ್ಯ ಸುದ್ದಿ

ಕೊರೊನಾ ಅಲೆ ತಗ್ಗಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿ: ರಾಜಪಾಲ ವಿ.ಆರ್. ವಾಲಾ

ಬೆಂಗಳೂರು: ಕೊರೊನಾ ಅಲೆ ತಗ್ಗಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ.  ಅದಕ್ಕೆ ಜನರ ಸಹಕಾರವೇ ಪ್ರಮುಖ ಕಾರಣವಾಗಿದೆ . ಕೊರೊನಾ ಬಿಕ್ಕಟ್ಟಿನ ಅವಕಾಶವನ್ನು ತಮ್ಮ ಸಾಮರ್ಥ್ಯ ವೃದ್ಧಿಸಲು ಮತ್ತು ಆರೋಗ್ಯ ಮೂಲಸೌಕರ್ಯ ಹಾಗೂ ಪಿಪಿಇ ಕಿಟ್ , ವೆಂಟಿಲೇಟರ್ ಉತ್ಪಾದನೆ ಹೆಚ್ಚಿಸಲು ಬಳಸಿಕೊಂಡಿದ್ದೇವೆ. ಇದು ಪ್ರಧಾನಿ ಮೋದಿ ಅವರ ದೂರದರ್ಶಿತ್ವ ಆತ್ಮ ನಿರ್ಭರ ಭಾರತ ಕಾರ್ಯಕ್ರಮದ ದಿಸೆಯಲ್ಲಿ ಉತ್ತಮ ಹೆಜ್ಜೆಯಾಗಿದೆ ಎಂದು ಹೇಳಿದರು.

72ನೇ ಗಣರಾಜ್ಯೋತ್ಸವವನ್ನು ಇಂದು ದೇಶಾದ್ಯಂತ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯಪಾಲ ವಿಆರ್ ವಾಲಾ ಕೂಡ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಕೊರೊನಾ ಕೊನೆಯ ಹಂತಕ್ಕೆ ತಲುಪಿದ್ದೇವೆ, ಆದರೆ ನಿರ್ಲಕ್ಷ್ಯ ಮಾಡಬೇಡಿ, ದೈಹಿಕ ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿರಲಿದೆ.ಈ ಬಾರಿ ಮಹಿಳಾ ಕೇಂದ್ರಿತ ಬಜೆಟ್‌ಗೆ ಆದ್ಯತೆ ನೀಡಲಾಗುವುದು, ಅಂಗನವಾಡಿಗಳು, ಸಂತಾನೋತ್ಪತ್ತಿ ಮತ್ತು ಮಹಿಳಾ ಆರೋಗ್ಯ ಕಾರ್ಯಕರ್ತರ ಮೂಲಕ ಗರ್ಭಿಣಿಯರಿಗೆ ಸೇವೆ ನೀಡಲು ಪ್ರಯತ್ನ ಮಾಡಲಾಗುತ್ತಿದೆ.

ಬೆಂಗಳೂರಿನಲ್ಲಿ 8015 ಕೋಟಿ ಅನುಮೋದಿತ ಮೊತ್ತದಲ್ಲಿ ಕೆರೆಗಳ ಸಂರಕ್ಷಣೆ ಮಾಡಿದ್ದೇವೆ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದ ರೂಪವನ್ನೇ ಬದಲಾಯಿಸಲಾಗುತ್ತಿದೆ.ಎಂದಿಗೂ ಮಣಿಯದ ಮಾನವ ಚೈತನ್ಯ ಶಕ್ತಿಗೆ ಈ ಗಣರಾಜ್ಯೋತ್ಸವವನ್ನು ಅರ್ಪಿಸುತ್ತೇನೆ, ಇದೊಂದು ಶತ್ರುವಿನ ವಿರುದ್ಧ ಪಡೆದ ಜಯವಾಗಿದೆ. 2020ರಲ್ಲಿ ಹಿಂದೆಂದೂ ಕಂಡರಿಯದ ಕೊರೊನಾ ಸವಾಲನ್ನು ಜಗತ್ತು ಎದುರಿಸುತ್ತಿರುವಾಗ, ನಾವು ನವ ಚೈತನ್ಯ ಮತ್ತು ಆಶೋತ್ತರದೊಂದಿಗೆ ಹೊಸ ವರ್ಷ 2021ಕ್ಕೆ ಹೆಜ್ಜೆ ಇರಸಿದ್ದೇವೆ ಹೇಳಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಸಿನಿಮಾ, ಕ್ರೀಡೆ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡಲಾಗುವುದು. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

To Top