ನವದೆಹಲಿ: ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕೇರಳದ ಉತ್ತರ ಭಾಗದಲ್ಲಿ ಏ.28ರಂದು ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳಗಾಡು, ತೆಲಂಗಾಣ, ಪುದುಚೇರಿ, ತಮಿಳುನಾಡು ಒಳಗೊಂಡಂತೆ ವಿವಿಧೆಡೆ ಏ. 29ರಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಗಾಳಿಯು ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬೀಸಲಿದೆ ಎಂದು ಇಲಾಖೆಯು ತಿಳಿಸಿದೆ.
ಏಪ್ರಿಲ್ 30ರಂದು ದಕ್ಷಿಣ ಕರ್ನಾಟಕದ ಒಳನಾಡು ಮತ್ತು ಕೇರಳದ ಉತ್ತರ ಭಾಗದ ಕೆಲವೆಡೆ ಭಾರಿ ಮಳೆ ಸಾಧ್ಯತೆ ಇದೆ.